ಗವಿಪುರದಲ್ಲಿ `ಬಡವ ರಾಸ್ಕಲ್` ಚಿತ್ರದ ಸಾಹಸ ಸನ್ನಿವೇಶ
Posted date: 09 Wed, Oct 2019 10:00:30 AM

ಗುಜ್ಜಲ್ ಟಾಕೀಸ್ ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ಹಾಗೂ ಡಾಲಿ ಧನಂಜಯ ಅವರು ನಿರ್ಮಿಸುತ್ತಿರುವ ‘ಬಡವ ರಾಸ್ಕಲ್‘ ಚಿತ್ರಕ್ಕೆ ಗವಿಪುರಂ ಗುಟ್ಟಹಳ್ಳಿಯಲ್ಲಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಧನಂಜಯ್ ಹಾಗೂ ಸಾಹಸ ಕಲಾವಿದರು ಅಭಿನಯಿಸಿದ ಈ ಸನ್ನಿವೇಶಕ್ಕೆ ವಿನೋದ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇದರೊಂದಿಗೆ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈ ತಿಂಗಳ 12 ರಿಂದ 20 ದಿನಗಳ ಕಾಲ ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ನಡೆಯಲಿದೆ.

ಶಂಕರ್ ಗುರು ನಿರ್ದೇಶನದ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಪೀತ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಧನಂಜಯ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೃತ ಅಯ್ಯಂಗಾರ್. ರಂಗಾಯಣ ರಘು, ನಾಗಭೂಷಣ್, ಪೂರ್ಣಚಂದ್ರ ಮೈಸೂರು, ನಿರಂಜನ್, ಚಂದ್ರು, ಅಲ್ಲು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಗವಿಪುರದಲ್ಲಿ `ಬಡವ ರಾಸ್ಕಲ್` ಚಿತ್ರದ ಸಾಹಸ ಸನ್ನಿವೇಶ - Chitratara.com
Copyright 2009 chitratara.com Reproduction is forbidden unless authorized. All rights reserved.