ಜಗ್ಗೇಶ್,ಸುರೇಶ್,ವಿಜಯಪ್ರಸಾದ್ ತೋತಾಪುರಿ 100 ದಿವಸ ಚಿತ್ರೀಕರಣ
Posted date: 14 Thu, Mar 2019 09:29:54 AM

ಕೆ ಎ ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ತೋತಾಪುರಿ. ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ ‘ತೋತಾಪುರಿಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತಿದ್ದಾರೆ.

ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ ‘ತೋತಾಪುರಿ’... ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ ೧೦೦ ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ ‘ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡುತ್ತಿದ್ದಾರೆ. ವಿಜಯಪ್ರಸಾದ್ ‘ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

‘ಎರಡನೇ ಮದುವೆ’, ‘ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ ಈ ‘ತೋತಾಪುರಿ’ಯನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್ ಈ ಚಿತ್ರವನ್ನು ಮಾವಿನ ಹಣ್ಣಿನ ಸೀಸನ್ನಿನಲ್ಲೇ ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಜಗ್ಗೇಶ್,ಸುರೇಶ್,ವಿಜಯಪ್ರಸಾದ್ ತೋತಾಪುರಿ 100 ದಿವಸ ಚಿತ್ರೀಕರಣ - Chitratara.com
Copyright 2009 chitratara.com Reproduction is forbidden unless authorized. All rights reserved.