ಜೂನ್ 11ರಂದು ಒಂಟಿ ಚಿತ್ರದ ಟ್ರೇಲರ್ ಬಿಡುಗಡೆ
Posted date: 05 Wed, Jun 2019 09:50:59 AM

ಸಾಯಿರಾಂ ಕ್ರಿಯೇಷನ್ಸ್ ಲಾಂಛನದಲ್ಲಿ ಆರ್ಯ ಅವರು ನಿರ್ಮಿಸಿರುವ ‘ಒಂಟಿ‘ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮುನ್ನ ಜೂನ್ ೧೧ರಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಶ್ರೀ(ಒರಟ ಐ ಲವ್ ಯು) ನಿರ್ದೇಶನದ ಈ ಚಿತ್ರದ ನಾಯಕರಾಗಿ ಚಿತ್ರದ ನಿರ್ಮಾಪಕರೂ ಆಗಿರುವ ಆರ್ಯ ಅಭಿನಯಿಸಿದ್ದಾರೆ. ಈ ಹಿಂದೆ ‘ಈ ಸಂಜೆ‘ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದ ಆರ್ಯ ಅವರಿಗೆ ಇದು ನಾಯಕರಾಗಿ ದ್ವಿತೀಯ ಚಿತ್ರ. ಈ ಹಿಂದೆ ಕಿಚ್ಚ ಸುದೀಪ ಅಭಿನಯದ ‘ಮೈ ಆಟೋಗ್ರಾಫ಼್‘, ‘ನಂ 73 ಶಾಂತಿ ನಿವಾಸ‘ ಮುಂತಾದ ಚಿತ್ರಗಳಲ್ಲೂ ಆರ್ಯ ನಟಿಸಿದ್ದಾರೆ.

ಕೆ.ಕಲ್ಯಾಣ್ ಹಾಗೂ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ಹಾಡುಗಳಿಗೆ ಮನೋಜ್.ಎಸ್(ಶ್ರೀಲಂಕ) ಸಂಗೀತ ನೀಡಿದ್ದಾರೆ. ಕೆ.ಶಶಿಧರ್ ಛಾಯಾಗ್ರಹಣ, ಕುಮಾರ್ ಕೋಟೆಕೊಪ್ಪ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಆರ್ಯ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮೇಘನಾರಾಜ್. ದೇವರಾಜ್, ಗಿರಿಜಾ ಲೋಕೇಶ್, ಶರತ್ ಲೋಹಿತಾಶ್ವ, ನೀನಾಸಂ ಅಶ್ವತ್, ಮಜಾಟಾಕೀಸ್ ಪವನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಜೂನ್ 11ರಂದು ಒಂಟಿ ಚಿತ್ರದ ಟ್ರೇಲರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.