ನಿರ್ದೇಶಕ ಬ್ರಹ್ಮ ರವರಿಗೆ ಬೆಂಗಳೂರು ಸಂಸ್ಥೆಯ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ ಪ್ರಶಸ್ತಿ
Posted date: 27 Tue, Aug 2024 01:47:07 PM
ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರಿನ ಸಂಸ್ಥೆಯೊಂದು ಭಾರತೀಯ ಚಿತ್ರರಂಗದ ಮೇರು ನಿರ್ದೇಶಕ ದಾದಾ ಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ಇದೇ ಪ್ರಥಮ ಬಾರಿಗೆ ಸ್ಥಾಪಿಸಿರುವ ಪ್ರಶಸ್ತಿಯನ್ನು ನೀಡಲಾಗಿದೆ.

ನಿರ್ದೇಶಕ  ಬ್ರಹ್ಮ ಅವರಿಗೆ ಬೆಂಗಳೂರು ಮೂಲದ ಸಂಸ್ಥೆ ಯೊಂದು ನೀಡುವ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ 2024 ಪ್ರಶಸ್ತಿ ಲಭಿಸಿದೆ.

ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಿರುವ ಸಿನಿಮಾ `ಸಾರಿ` (ಕರ್ಮ ರಿಟರ್ನ್ಸ್). ಬ್ರಹ್ಮ ಈ ಚಿತ್ರದ ನಿರ್ದೇಶಕ. ರಾಗಿಣಿ ದ್ವಿವೇದಿ ಹಾಗೂ ಅಫ್ಜಲ್ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.   

ನಿರ್ದೇಶಕರಿಗೆ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿ, ಅವರನ್ನು ಅಭಿನಂದಿಸಿದೆ. ಈ ಹಿಂದೆ 2014 ರಲ್ಲಿ ತೆರೆಕಂಡ ಸೌಂದರ್ಯ ರಜನಿಕಾಂತ್ ನಿರ್ದೇಶನದ, ರಜನಿಕಾಂತ್ ಹಾಗೂ ದೀಪಿಕಾ ಪಡುಕೋಣೆ ನಟಿಸಿದ್ದ "ಕೊಚಾಡಿಯನ್" ಭಾರತದ ಮೊದಲ ಮೋಷನ್ ಕ್ಯಾಪ್ಚರ್ ಚಿತ್ರವಾಗಿತ್ತು.

 ಕನ್ನಡದಲ್ಲಿ "ಸಾರಿ" (ಕರ್ಮ ರಿಟರ್ನ್) ಈ ವಿಶೇಷ ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ಮೊದಲ ಚಿತ್ರವಾಗಿದೆ. "ಸಾರಿ" ಚಿತ್ರ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ದವಾಗಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed