ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ``ತನುಜಾ`` ಚಿತ್ರದ ಫಸ್ಟ್ ಲುಕ್ ಬಿಡುಗಡೆ.
Posted date: 10 Wed, Feb 2021 02:03:52 PM

ಸಚಿವ ಸುಧಾಕರ್ ಹಾಗೂ ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತಿ.

Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ``ತನುಜಾ`` ಚಿತ್ರದ ಫಸ್ಟ್ ಲುಕ್ ಅನ್ನು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ‌ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಸುಧಾಕರ್ ಹಾಗೂ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು. ಚಿತ್ರತಂಡದ ಪರವಾಗಿ ನಿರ್ದೇಶಕ ಹರೀಶ್ ಎಂ ಡಿ ಹಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ರಘುನಂದನ್ ಎಸ್ ಕೆ  ಹಾಜರಿದ್ದರು.

ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಲೇಖನವೊಂದರಿಂದ ಪ್ರಭಾವಿತರಾಗಿ ಹರೀಶ್ ಎಂ.ಡಿ ಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನೈಜ ಫಟನೆ ಆಧಾರಿತ ಈ ಚಿತ್ರದ ಚಿತ್ರೀಕರಣ ಮಾರ್ಚ್ ಎರಡನೇ‌ವಾರದಲ್ಲಿ ಆರಂಭವಾಗಲಿದೆ. ಬೆಂಗಳೂರು - ಶಿವಮೊಗ್ಗದಲ್ಲಿ ಚಿತ್ರೀಕರಣ ನಡೆಯಲಿದೆ.

2016_17 ಸಾಲಿನ ರಾಜ್ಯಪ್ರಶಸ್ತಿಗೆ ಭಾಜನವಾಗಿದ್ದ "ಅಂತರ್ಜಲ" ಚಿತ್ರವನ್ನು  ನಿರ್ದೇಶಿಸಿದ್ದ ಹರೀಶ್ ಎಂ ಡಿ ಹಳ್ಳಿ ಅವರಿಗೆ ಇದು ಎರಡನೇ ಚಿತ್ರ. ಸರ್ಕಾರಿ ಹಿ.ಪ್ರಾಥಮಿಕ ಶಾಲೆ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ‌ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಪ್ರದ್ಯೋತನ ಸಂಗೀತ ನಿರ್ದೇಶನ ಹಾಗೂ ರವೀಂದ್ರನಾಥ್ ಅವರ ಛಾಯಾಗ್ರಹಣವಿರುವ "ತನುಜಾ" ಚಿತ್ರಕ್ಕೆ ಆರ್ ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆಯುತ್ತಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed