ತಮ್ಮ ವಿಶಿಷ್ಟ ಕಂಠ ಹಾಗೂ ಅವರು ಸಿ ಅಶ್ವಥ್ ಅದೇ ಸ್ವರದಂತೆ ಹಾಡುತ್ತಾರೆ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್ ಸಜ್ಜು ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನವೀನ್ ಹೊಸ ಪಯಣಕ್ಕೆ ಕನ್ನಡ ಚಿತ್ರರಂಗದ ತಾರೆಯರು ಸಾಥ್ ಕೊಟ್ಟಿದ್ದಾರೆ. ಲೋ ನವೀನ ಸಿನಿಮಾದ ಟೈಟಲ್ ನ್ನು ಸ್ಯಾಂಡಲ್ ವುಡ್ ಹಾಗೂ ಕಿರುತೆರೆಯ 100 ಜನ ನಟ- ನಟಿಯರು ತಮ್ಮ, ತಮ್ಮ ಸೋಷಿಯಲ್ ಮೀಡಿಯಾಗಳ ಮೂಲಕ ನವೀನ್ ಸಜ್ಜು ಚೊಚ್ಚಲ ಸಿನಿಮಾಗೆ ಶುಭ ಕೋರಿದ್ದಾರೆ.
ಲೋ ನವೀನ, ಹಳ್ಳಿ ಸೊಗಡಿನ ಚಿತ್ರವಾಗಿದ್ದು. ಸ್ವತಃ ನವೀನ್ ಸಜ್ಜು ಅವರೇ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುರ್ತಿದ್ದಾರೆ. ಧನುರ್ದಾರಿ ಪವನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ ಮೂರು ಜನ ಸಿನಿಮಾಟೋಗ್ರಾಫರ್ ಗಳಿರುವುದು ವಿಶೇಷ. ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಹಾಗೂ ಪ್ರಸನ್ನ ಸಾಗರ ಅವರ ವಸ್ತ್ರ ವಿನ್ಯಾಸ ಲೋ ನವೀನ ಚಿತ್ರಕ್ಕಿದೆ. ಎನ್ ಎಸ್-ನವೀನ್ ಸಜ್ಜು ಸ್ಟುಡಿಯೋ ಬ್ಯಾನರ್ ಅಡಿ ತಯಾರಾರಗುತ್ತಿರುವ ಸಿನಿಮಾಗೆ ಅನಿವಾಸಿ ಭಾರತೀಯರಾದ ವರ್ಜೀನಿಯಾ ನಿವಾಸಿ ಕೀರ್ತಿ ಸ್ವಾಮಿ ಬಂಡವಾಳ ಹೂಡಿದ್ದಾರೆ.