ಈ ವಾರ ತೆರೆಗೆ `ಬುಲ್‌ಬುಲ್`
Posted date: 06 Mon, May 2013 � 07:12:14 PM

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಬುಲ್‌ಬುಲ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
     ತೂಗುದೀಪ ಪ್ರೊಡಕ್ಷನ್ಸ್‌ನ ನಿರ್ಮಾಪಕರಾದ ಶ್ರೀಮತಿ ಮೀನಾತೂಗುದೀಪಶ್ರೀನಿವಾಸ್ ‘ಬುಲ್‌ಬುಲ್ ಚಿತ್ರವನ್ನು ನಿರ್ಮಿಸಿದ್ದಾರೆ. ದಿನಕರ್ ತೂಗುದೀಪ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸಂಸ್ಥೆಯ ಮೂರನೇ ಕಾಣಿಕೆಯಾದ ಈ ಚಿತ್ರವನ್ನು ಎಂ.ಡಿ.ಶ್ರೀಧರ್ ನಿರ್ದೇಶಿಸಿದ್ದಾರೆ.  
     ಚಿತ್ರಕ್ಕೆ ಸಂಗೀತ ನೀಡಿರುವ ವಿ.ಹರಿಕೃಷ್ಣ ತಮ್ಮದೇ ಸಂಸ್ಥೆಯ ಮೂಲಕ ಹಾಡುಗಳ ಸೀಡಿ ಬಿಡುಗಡೆ ಮಾಡಿದ್ದಾರೆ. ಕವಿರಾಜ್ ಗೀತರಚನೆ ಮಾಡುವುದರೊಂದಿಗೆ ಸಂಭಾಷಣೆಯನ್ನೂ ಬರೆದಿದ್ದಾರೆ. ಖ್ಯಾತ ಛಾಯಾಗ್ರಾಹಕ ಕೃಷ್ಣಕುಮಾರ್(ಕೆ ಕೆ) ಅವರ ಛಾಯಾಗ್ರಹಣ, ಸೌಂದರರಾಜ್ ಸಂಕಲನ, ಮಲ್ಲಿಕಾರ್ಜುನ್(ಗದಗ) ಸಹನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ರಂಗಸ್ವಾಮಿ, ಸುಂದರರಾಜ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅಂಬರೀಶ್, ದರ್ಶನ್, ರಚಿತರಾಂ, ಅಶೋಕ್, ಚಿತ್ರಾಶೆಣೈ, ಶರಣ್, ರಮೇಶ್‌ಭಟ್, ಸಿಹಿಕಹಿ ಚಂದ್ರು, ಸಾಧುಕೋಕಿಲಾ, ಟೆನ್ನಿಸ್‌ಕೃಷ್ಣ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed