ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ``ಬುದ್ದಿವಂತ- 2``ಚಿತ್ರ ಬಿಡುಗಡೆ
Posted date: 25 Tue, Jul 2023 05:08:22 PM
ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ  ಚಿತ್ರತಂಡ "ಬುದ್ದಿವಂತ 2" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
 
"ಬುದ್ದಿವಂತ" ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.
 
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ "ಬುದ್ದಿವಂತ 2".
 
ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ನಾಯಕಿಯರಾಗಿ  ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed