ವಿದ್ಯಾರ್ಥಿಗಳಿಂದ ಬಿಡುಗಡೆಯಾಯಿತು``Scam (1770)``ಚಿತ್ರದ ಪೋಸ್ಟರ್
Posted date: 06 Thu, Apr 2023 02:02:51 PM
ಇಂದಿನ ವಿದ್ಯಾರ್ಥಿಗಳೆ ಮುಂದಿನ ಸತ್ ಪ್ರಜೆಗಳು ಎಂಬ ಮಾತಿದೆ. ಅದಕ್ಕೆ ಅನುಗುಣವಾಗಿ ಈಗಿನ ಶಿಕ್ಷಣ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳನ್ನು  ಕುರಿತಾದ ಕಥಾಹಂದರ ಹೊಂದಿರುವ "SCAM (1770)" ಚಿತ್ರ ಬರುತ್ತಿದೆ. 

ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ನಿರ್ಮಿಸಿರುವ,  ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. 
ಬೆಂಗಳೂರು ನಗರದ ಆಟದ ಮೈದಾನವೊಂದರಲ್ಲಿ ಸುಮಾರು  20 ತಂಡಗಳು ಭಾಗವಹಿಸಿರುವ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು. ಆ ತಂಡಗಳ ನಾಯಕರು(ವಿದ್ಯಾರ್ಥಿಗಳು) "SCAM (1770)" ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.

ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೆನೆಲ್ಲಾ ನಡೆಯುತ್ತಿದೆ ಎಂಬ  ವಿಚಾರವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾನೆ SCAM (1770)  ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ತಿಳಿಸಿದ್ದಾರೆ. 

ಡಿ.ಕ್ರಿಯೇಷನ್ಸ್ ಇತ್ತೀಚೆಗೆ ಆಕ್ಟ್-1978 ಮತ್ತು 19.20.21 ಎಂಬ ಸದಭಿರುಚಿ ಚಿತ್ರಗಳನ್ನು ನೀಡಿದ್ದು,  ದೇವರಾಜ್ ಆರ್ ಅವರ ನಿರ್ಮಾಣದ ಈ ಚಿತ್ರಕ್ಕೆ ಡಾ||ಇಂದು ನಟೇಶ್ ಹಾಗೂ ನೇತ್ರಾವತಿ(ಅಡ್ವೊಕೇಟ್) ಕಥೆ ಬರೆದಿದ್ದಾರೆ. ಚಿತ್ರ ಕಥೆಯನ್ನು  ಶಂಕರ್ ರಾಮನ್ ಹಾಗೂ ವಿಕಾಸ್ ಪುಷ್ಪಗಿರಿ ಬರೆದಿದ್ದಾರೆ.  ಸಂಭಾಷಣೆ  ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ - ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನವಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ರಂಜನ್(ದಡ್ಡ ಪ್ರವೀಣ), ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಈಗಾಗಲೇ "SCAM (1770)" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

April  15th  ಕ್ಕೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed