`ಗಾಂಧಿ ಮತ್ತು ನೋಟು` ಚಿತ್ರದ ಟ್ರೇಲರ್ ಡಾ|| ಶಿವರಾಜಕುಮಾರ್ ಬಿಡುಗಡೆ ಮಾಡಿದರು
Posted date: 09 Thu, Sep 2021 10:29:10 PM
ವಿಭಿನ್ನ ಕಥಾಹಂದರ ಹೊಂದಿರುವ ``ಗಾಂಧಿ ಮತ್ತು ನೋಟು`` ಚಿತ್ರದ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

ಸಾಹಿತಿ ವಿ.ನಾಗೇಂದ್ರಪ್ರಸಾದ್ ಪುತ್ರಿ ದಿವಿಜಾ ನಾಗೇಂದ್ರಪ್ರಸಾದ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.
 ಲೋಕೇಶ್‌ ಡಿ.ಕೆ, ಮುರುಧ್ಯ, ಪ್ರಜ್ಞಾ ಬ್ರಹ್ಮಾವರ್, ಕೆ.ಬಿ.ರವಿ, ರಂಗಸ್ವಾಮಿ, ನವೀನ್, ವಿಶಾಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭಾವನ ಕಂಬೈನ್ಸ್ ಲಾಂಛನದಲ್ಲಿ ಸುಧಾರಾಣಿ ಹೆಚ್.ಆರ್, ವೀಣಾ ಪದ್ಮನಾಭ,  ಮಂಜುನಾಥ್ ಬಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

 ಪ್ರಿಯಾಂಕ ಉಪೇಂದ್ರ ಅಭಿನಯದ ಸೆಕೆಂಡ್ ಆಫ್ ಚಿತ್ರ ನಿರ್ದೇಶಿಸಿದ್ದ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಕೂಡ ಯೋಗಿ ಅವರದೆ.

ಗಾಂಧಿ ತತ್ವಗಳನ್ನು ಹಾಗೂ ನೋಟನ್ನು ಈಗಿನ ಜನ ಯಾವ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಷಯವನ್ನು ಹಳ್ಳಿ ಹುಡುಗಿ(ದಿವಿಜಾ) ಪಾತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕರು. ಚಿಕ್ಕ ವಯಸ್ಸಿನ ಈ ಹುಡುಗಿ ಹೇಳುವ ಮಾತು ಎಲ್ಲಾವರ್ಗದ  ಜನರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದೇ ಇದರ ಕಥಾಸಾರಾಂಶ.

ಸಾಗರದ ತುಂಬ್ರಿ ಎಂಬ ಸ್ಥಳದಲ್ಲೇ ಹೆಚ್ಚಿನ‌ ಚಿತ್ರೀಕರಣ ನಡೆದಿದೆ. ಪ್ರಸ್ತುತ ಚಿತ್ರ ಡಿ ಐ ನಿಂದ ಸಿಂಗಾರಗೊಳ್ಳುತ್ತಿದೆ.
ಅಕ್ಟೋಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.

ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ಹಾಡುಗಳಿಗೆ ವಾಣಿ ಹರಿಕೃಷ್ಣ  ಸಂಗೀತ ನೀಡಿದ್ದಾರೆ. 
 ಅಚ್ಚು ಸುರೇಶ್ ಛಾಯಾಗ್ರಹಣ,  ವಸಂತಕುಮಾರ್ ಸಂಕಲನ ಹಾಗೂ ವಿ.ಎಲ್ ಸತೀಶ್ ಅವರ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಚಂದ್ರಶೇಖರ್ ಸಂಭಾಷಣೆ ಬರೆದಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed