ಜೂನ್‌ನಲ್ಲಿ ‘ವೀಕ್ ಎಂಡ್ ತೆರೆಗೆ
Posted date: 14 Tue, May 2019 – 08:34:27 AM

ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ ‘ವೀಕ್ ಎಂಡ್‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಜೂನ್‌ನಲ್ಲಿ ತೆರೆಗೆ ಬರಲಿದೆ..

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  

 

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed