ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ `ಅರ್ಜುನ್ ಗೌಡ` ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ
Posted date: 05 Fri, Jul 2019 – 04:30:37 PM

 ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ ‘ಅರ್ಜುನ್ ಗೌಡ‘ ಚಿತ್ರದ ಆಕ್ಷನ್ ಟೀಸರ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಟೀಸರನ್ನು ಡೈನಾಮಿಕ್ ಸ್ಟಾರ್ ದೇವರಾಜ್ ಬಿಡುಗಡೆ ಮಾಡಿದರು. ರಾಮು ಅವರು ನಿರ್ಮಿಸಿದ್ದ ‘ಲಾಕಪ್‌ಡೆತ್‘ ಮೊದಲಾದ ಚಿತ್ರಗಳಲ್ಲಿ ದೇವರಾಜ್ ಅವರು ಅಭಿನಯಿಸಿದ್ದರು. ಈಗ ಅವರದೇ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ‘ಅರ್ಜುನ್ ಗೌಡ‘ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ನಾಯಕರಾಗಿ ಅಭಿನಯಿಸುತ್ತಿದ್ದು, ದೇವರಾಜ್ ಅವರೆ ಟೀಸರ್ ಬಿಡುಗಡೆ ಮಾಡಿರುವುದು ವಿಶೇಷ.

ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಧರ್ಮವಿಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಜೈಆನಂದ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಸಂಕಲನ, ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


GALLERY
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed