ಬೆಂಗಳೂರಿನಲ್ಲಿ ‘ವೀಕ್ ಎಂಡ್‘
Posted date:

ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ ‘ವೀಕ್ ಎಂಡ್‘ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಚಿತ್ರದಲ್ಲಿ ಸಾಫ಼್ಟ್‌ವೇರ್ ಉದ್ಯೋಗಿಯಾಗಿರುವ ನಾಯಕ ಕಾರ್ಯದೊತ್ತಡದ ನಡುವೆಯೂ ತನ್ನ ಸಹುದ್ಯೋಗಿಗಳೊಡನೆ ಒಂದಿಷ್ಟು ತರಲೆ - ತಮಾಷೆ ಮಾಡುವ ಸನ್ನೆವೇಶದ ಚಿತ್ರೀಕರಣ ಬನಶಂಕರಿಯ ಖಾಸಗಿ ಕಂಪನಿಯೊಂದರಲ್ಲಿ ಚಿತ್ರಿಸಿಕೊಳ್ಳಲಾಯಿತು. ನಾಯಕ ಮಿಲಿಂದ್, ನಾಗಭೂಷಣ್, ಶಿವಕುಮಾರ್, ನಿತು ಬಾಲ ಹಾಗೂ ವೀಣಾ ಜಯಶಂಕರ್ ಈ ಭಾಗದ ಚಿತ್ರೀಕರಣದಲ್ಲಿ ಅಭಿನಯಿಸಿದ್ದರು.

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್ ದೃಶ್ಯವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.   

ಮಿಲಿಂದ್ ಅವರು ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed