ಸದ್ಯದಲ್ಲೇ `ಎಂ ಎಲ್ ಎ`
Posted date: 14 Thu, Jun 2018 – 09:01:24 AM

ತ್ರಿವೇಣಿ ೨೪ಕ್ರಾಫ಼್ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸಿರುವ ‘ಎಂ ಎಲ್ ಎ‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲ್ಲೇ ಪಿ.ಆರ್.ಕೆ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ವೆಂಕಿ ಪೆಲುಗುಳ ಈ ಚಿತ್ರದ ಸಹ ನಿರ್ಮಾಪಕರು.

ಮೌರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಪ್ರಥಮ್ ಅಭಿನಯಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಷ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್.ಎಂ.ರೇವಣ್ಣ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ.

ವಿಕ್ರಂಸುಬ್ರಮಣ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed