``ಚೇಸರ್``ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ
Posted date: 07 Thu, Sep 2023 05:33:09 PM
 "ಚೇಸರ್" ಚಿತ್ರದ ನಾಯಕ ನಟ ಸುಮಂತ್ ಶೈಲೇಂದ್ರ ಅವರ ಹುಟ್ಟುಹಬ್ಬ ದಂದು ಚಿತ್ರದ  ಫಸ್ಟ್ ಲುಕ್  ಮೋಷನ್ ಪೋಸ್ಟರ್ ಬಿಡುಗಡೆಯಾಯಿತು  ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ  ಚಿತ್ರದ ಫಸ್ಟ್ ಲುಕ್ 
 
 
ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ "ಚೇಸರ್" ಚಿತ್ರದ ಮೋಷನ್ ಪೋಸ್ಟರ್   ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ.
 
ಸಸ್ಪೆನ್ಸ್ ವಿತ್ ಆಕ್ಷನ್ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ಎಂ.ಜೈರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ‌ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. 
 
ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸುತ್ತಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು "ಚೇಸರ್" ಚಿತ್ರದ ತಾರಾಬಳಗದಲ್ಲಿದ್ದಾರೆ.
 
 
 
 
 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed