ಬೆಂಗಳೂರಿನಲ್ಲಿ `ರೋಮಿಯೋ` ಸಂಚಾರ
Posted date: 29 Thu, Sep 2011 ? 06:08:36 PM

ಕೆ.ಎಸ್.ಪಿಕ್ಚರ್ಸ್ ಲಾಂಛನದಲ್ಲಿ ನವೀನ್(ನಾಯಕ) ಹಾಗೂ ರಮೇಶ್‌ಕುಮಾರ್ ನಿರ್ಮಿಸುತ್ತಿರುವ ‘ರೋಮಿಯೋ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್‌ಭಟ್, ಸಿಹಿಕಹಿಚಂದ್ರು, ಮಿತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಅರ್ಜುನ್‌ಜನ್ಯ ಸಂಗೀತ ನಿರ್ದೇಶನದಲ್ಲಿ ಚಿತ್ರದ ಏಳು ಹಾಡುಗಳು ಸಿದ್ದವಾಗಿದೆ. ಸದ್ಯ ಒಂದು ಹಾಡಿನ ಚಿತ್ರೀಕರಣ ಪೂರ್ಣವಾಗಿದ್ದು, ಉಳಿದ ಹಾಡುಗಳ ಚಿತ್ರೀಕರಣ ಅಕ್ಟೋಬರ್‌ನಲ್ಲಿ ಆರಂಭವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.
ಶೇಖರ್ ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್‌ಭಟ್, ಮಿತ್ರ ರಂಗಾಯಣ ರಘು, ಸುಧಾಬೆಳವಾಡಿ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed