ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಅಭಿನಯಿಸಿರುವ ``Mr ನಟ್ವರ್ ಲಾಲ್`` ಚಿತ್ರದ ಯುಗಳಗೀತೆ .
Posted date: 09 Thu, Nov 2023 06:03:02 PM
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mr ನಟ್ವರ್ ಲಾಲ್" ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. 
 
ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಅಚ್ಚಚ್ಚಚ್ಚು ಅಚ್ಚುಮೆಚ್ಚು" ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. 

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ.ಲವ ನಿರ್ದೇಶಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.     

  ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.     
                      
ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ "Mr ನಟ್ವರ್ ಲಾಲ್" ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed