ರಾಧಾ ಭಗವತಿ``ವಸಂತಕಾಲದ ಹೂಗಳು`` ಚಿತ್ರಕ್ಕೆ ನಾಯಕಿ
Posted date: 13 Wed, Sep 2023 02:41:24 PM
ಜನಪ್ರಿಯ "ರಾಮಾಚಾರಿ" ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ  ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 

ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು,  ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಚಿತ್ರದ ಹೆಸರೇ ನನಗೆ ಆಪ್ತವೆನಿಸಿತು. ಇನ್ನು ಕಥೆ ಕೇಳಿದಾಗಲಂತೂ ಮೂರ್ನಾಲ್ಕು ದಿನಗಳ ಕಾಲ ಆ ಗುಂಗಿನಲ್ಲೇ ಇದ್ದೆ.  ಖಂಡಿತ ಚಿತ್ರ ನೋಡಿದವರಿಗೆಲ್ಲ ತಮ್ಮ ಕಾಲೇಜು ದಿನಗಳ ನೆನಪು ಮರುಕಳಿಸದೇ ಇರದು. ನಟನೆಗೆ ಹೆಚ್ಚು ಅವಕಾಶ ಇರುವಂತ ಪಾತ್ರ ಸಿಕ್ಕಿದ್ದಕ್ಕೆ ಖುಷಿಯಿದೆ. ಸಿನಿಪ್ರಿಯರ ಪ್ರತಿಕ್ರಿಯೆಗೆ ಕಾತರದಿಂದ ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ರಾಧಾ ಭಗವತಿ .
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed