ಕೆ.ಎಸ್.ಪಿಕ್ಚರ್ಸ್ ಲಾಂಛನದಲ್ಲಿ ನವೀನ್(ನಾಯಕ) ಹಾಗೂ ರಮೇಶ್ಕುಮಾರ್ ನಿರ್ಮಿಸುತ್ತಿರುವ ‘ರೋಮಿಯೋ ಚಿತ್ರಕ್ಕೆ ಅರವತ್ತೈದು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಪೂರ್ಣಗೊಂಡಿರುವ ಚಿತ್ರಕ್ಕೆ ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಫ಼ೆಬ್ರವರಿಯಲ್ಲಿ ‘ರೋಮಿಯೋ ಹಾಡುಗಳ ಸೀಡಿ ಬಿಡುಗಡೆಯಾಗಲಿದೆ. ಚಿತ್ರ ಮಾರ್ಚ್ನಲ್ಲಿ ತೆರೆಗೆ ಬರಲಿದೆ.
ಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್ಭಟ್, ಮಿತ್ರ ರಂಗಾಯಣ ರಘು, ಸುಧಾಬೆಳವಾಡಿ ಮುಂತಾದವರಿದ್ದಾರೆ.