ದೀಪಕ್ ಅರಸ್``ನಿರ್ದೇಶನದ ``ಶುಗರ್ ಫ್ಯಾಕ್ಟರಿ`` ಗೆ ಜಯಂತ ಕಾಯ್ಕಿಣಿ ಬರೆದರು ``ಜಹಾಪನಾ``ಹಾಡು ಬಿಡುಗಡೆಯಾಗಿದೆ
Posted date: 14 Sat, Oct 2023 01:31:16 PM
ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ  ಸಂಗೀತ ನೀಡಿದ್ದಾರೆ.

ಈಗಾಗಲೇ "ಶುಗರ್ ಫ್ಯಾಕ್ಟರಿ" ಟ್ರೇಲರ್ ಎಲ್ಲರ ಮನಗೆದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ "ಶುಗರ್ ಫ್ಯಾಕ್ಟರಿ" ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ  ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed