ವಿಜಯ ದಶಮಿಯಂದು ಬಿಡುಗಡೆಯಾಯಿತು``ಗರುಡ ಪುರಾಣ``ಚಿತ್ರದ ಟ್ರೇಲರ್
Posted date: 25 Wed, Oct 2023 08:10:16 AM
27 ಫ್ರೇಮ್ ಕ್ರಿಯೇಷನ್ಸ್  ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ "ಗರುಡ ಪುರಾಣ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3 ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಟೀಸರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ.

ಜನಪ್ರಿಯ "ಕಾಂತಾರ" ಸೇರಿದಂತೆ ಅನೇಕ ಚಿತ್ರಗಳಿಗೆ ಆನ್ ಲೈನ್ ಎಡಿಟರ್ ಆಗಿ ಕಾರ್ಯನಿರ್ವಹಿಸಿರುವ  ಮಂಜುನಾಥ್ ಬಿ ನಾಗಬಾ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.  
 
ಚಿತ್ರದ ಒಂದು ಭಾಗಕ್ಕೆ  ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ "ಗರುಡ ಪುರಾಣ" ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.
 
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ -  "ಗರುಡ ಪುರಾಣ" ಚಿತ್ರದ ನಾಯಕನಾಗೂ ಮಂಜುನಾಥ್ ಬಿ ನಾಗಬಾ ನಟಿಸಿದ್ದಾರೆ, ದಿಶಾ ಶೆಟ್ಟಿ  ನಾಯಕಿಯಾಗಿ ಅಭಿನಯಿಸಿದ್ದಾರೆ. "ಭಜರಂಗಿ" ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ಪುನೀತ್ ಆರ್ಯ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ "ಗರುಡ ಪುರಾಣ" ಚಿತ್ರದ ಛಾಯಾಗ್ರಾಹಕರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed