ಕೆ.ಎಸ್.ಪಿಕ್ಚರ್ಸ್ ಲಾಂಛನದಲ್ಲಿ ನವೀನ್(ನಾಯಕ) ಹಾಗೂ ರಮೇಶ್ಕುಮಾರ್ ನಿರ್ಮಿಸುತ್ತಿರುವ ‘ರೋಮಿಯೋ ಚಿತ್ರಕ್ಕಾಗಿ ಕವಿರಾಜ್ ಬರೆದಿರುವ ‘ಆಲೋಚನೆ ಆರಾಧನೆ ಎಲ್ಲಾ ನಿನ್ನಿಂದಲೇ ಎಂಬ ಹಾಡಿನ ಚಿತ್ರೀಕರಣ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದಿದೆ. ಗಣೇಶ್ ಹಾಗೂ ಭಾವನಾ ವಿದೇಶಿ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದ ಈ ಹಾಡಿಗೆ ಶ್ರೀಲಕ್ಷ್ಮೀ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಖ್ಯಾತ ಗಾಯಕಿ ಶ್ರೇಯಾಘೋಶಾಲ್ ಈ ಹಾಡನ್ನು ಹಾಡಿದ್ದಾರೆ.
ಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಗಣೇಶ್, ಭಾವನಾ(ಜಾಕಿ), ಅವಿನಾಶ್, ಸಾಧುಕೋಕಿಲಾ, ರಮೇಶ್ಭಟ್, ಮಿತ್ರ ರಂಗಾಯಣ ರಘು, ಸುಧಾಬೆಳವಾಡಿ ಮುಂತಾದವರಿದ್ದಾರೆ.