ಸಿನಿಮಾವಾಗ್ತಿದೆ `ಪರ್ವ`ಕಾದಂಬರಿ…ಕಾಶ್ಮೀರಿ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್.. ಟೈಟಲ್ ಲಾಂಚ್ ಮಾಡಿದ ಎಸ್.ಎಲ್. ಭೈರಪ್ಪ
Posted date: 21 Sat, Oct 2023 01:30:52 PM
ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪ ಅವರ `ಪರ್ವ`ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಇದನ್ನು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ. `ದಿ ಕಾಶ್ಮೀರ್ ಫೈಲ್ಸ್`, `ದಿ ವ್ಯಾಕ್ಸಿನ್ ವಾರ್` ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ  `ಪರ್ವ`ಕೃತಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದಾರೆ. 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಒಂದು ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ನನಗೆ ಕರೆ ಮಾಡಿದ್ದರು. ಭೈರಪ್ಪನವರ ಜೊತೆ ಮಾತನಾಡುವಂತೆ ಹೇಳಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಿ ಅವರು ಪರ್ವ ಸಿನಿಮಾ ಮಾಡುವಂತೆ ಹೇಳಿದರು. ಮಹಾಭಾರತದಲ್ಲಿ ನಾವು ಕೇಳದೆ ಇರುವಂತಹ ವಿಷಯಗಳನ್ನ ಬರೆದಿದ್ದಾರೆ. ಇದಕ್ಕಾಗಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಈ ಸಿನಿಮಾ ಮೂರು ಪಾರ್ಟ್ಗಳಲ್ಲಿ ಬರುತ್ತದೆ’ ಎಂದು ಹೇಳಿದ್ದಾರೆ.

ಪಲ್ಲವಿ ಜೋಷಿ ಮಾತನಾಡಿ, `ಪರ್ವ` ಕಾದಂಬರಿಯನ್ನು ಸಿನಿಮಾ ಮಾಡುತ್ತಿರುವುದು ಜವಾಬ್ದಾರಿ ಹೆಚ್ಚಿಸಿದೆ. ಈ ವಿಷಯವನ್ನು ನಿರ್ವಹಿಸುವುದು ಅಷ್ಟು ಸುಲಭವಲ್ಲ. ಭೈರಪ್ಪ ಸರ್ ಗುರಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿರುವುದು ಖುಷಿ ಕೊಟ್ಟಿದೆ. ಪರ್ವ ಸಿನಿಮಾವನ್ನು 3 ಭಾಗದಲ್ಲಿ ಕನ್ನಡ ಹಾಗೂ ಹಿಂದಿ ಎರಡು ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಕಾಶ್ ಇಲ್ಲದೇ ಇದು ಆಗುತ್ತಿರಲಿಲ್ಲ` ಎಂದರು.

ಎಸ್.ಎಲ್. ಭೈರಪ್ಪ ಮಾತನಾಡಿ, `ಪರ್ವ` ಕಾದಂಬರಿಯನ್ನು ಸಿನಿಮಾ ಮಾಡಲು ಬಂದಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದೆ. ಇವರು ಮಾಡಿರುವ ಸಿನಿಮಾಗಳು ಸಕ್ಸಸ್ ಆಗಿವೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನೋ ಅನ್ನೋದನ್ನು ತೋರಿಸಬಹುದು. ಸಿನಿಮಾ ಮಾಡಲು ನನ್ನ ಒಪ್ಪಿಗೆ ಇದೆ. ಹಾರೈಕೆ ಇದೆ’ ಎಂದರು.  

ಪರ್ವ ಕಾದಂಬರಿಯ ವಿಷಯ ಏನ್ನು ಅನ್ನುವುದು ಓದಿದವರಿಗೆ ಗೊತ್ತೇ ಇದೆ. ಮಹಾಭಾರತವನ್ನ ಆಯಾ ಪಾತ್ರಗಳ ಮೂಲಕ ಮತ್ತೊಮ್ಮೆ ಹೇಳಿರೋದೇ ಈ ಪರ್ವ ಕಾದಂಬರಿಯ ವಿಶೇಷ. ಅಂತಹ ಈ ಒಂದು ಕಾದಂಬರಿಯನ್ನ ಕ್ಲಾಸಿಕ್ ಕೃತಿ ಅಂತಲೇ ಪರಿಗಣಿಸಲಾಗುತ್ತದೆ. ಇದೀಗ ಈ ಪರ್ವ ಕಾದಂಬರಿಗೆ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed