ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ `ಚಂದ್ರಮುಖಿ-2` ರಿಲೀಸ್
Posted date: 09 Sat, Sep 2023 05:51:01 PM
ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ `ಚಂದ್ರಮುಖಿ 2` ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ `ಚಂದ್ರಮುಖಿ 2`ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ. ಅಂದ್ರೆ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಸುಭಾಷ್ ಕರಣ್ ಅವರು `ಲೈಕಾ ಪ್ರೊಡಕ್ಷನ್ಸ್` ಸಂಸ್ಥೆ ಮೂಲಕ `ಚಂದ್ರಮುಖಿ 2` ಚಿತ್ರ ನಿರ್ಮಿಸಿದ್ದಾರೆ. ಎಂ.ಎಂ. ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಆರ್.ಡಿ. ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಈ ಸಿನಿಮಾಗಿದೆ. ಕಂಗನಾ ರಣಾವತ್ ಜೊತೆ ರಾಘವ ಲಾರೆನ್ಸ್, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ವಡಿವೇಲು, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ಮುಂತಾದವರು ನಟಿಸಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed