``45``ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಅವರ ಜೊತೆಗೆ ರಾಜ್ ಬಿ ಶೆಟ್ಟಿ
Posted date: 21 Fri, Oct 2022 02:09:16 PM
``ಗಾಳಿಪಟ 2`` ಚಿತ್ರದ ಯಶಸ್ಸಿನ  ನಂತರ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಚಿತ್ರ``45``.  ಈ ಚಿತ್ರವನ್ನು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿದ್ದಾರೆ. 
 
ಮಾಸ್ ನ ಅಧಿಪತಿ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರೊಂದಿಗೆ, ಮಾಸ್ ಗೆ "ಓಂ" ಕಾರ ಹಾಕಿದ ರಿಯಲ್ ಸ್ಟಾರ್ ಉಪೇಂದ್ರ ಅವರು "45" ಸಿನಿಮಾದಲ್ಲಿ ಅಭಿನಯಿಸುತ್ತಿರುವುದನ್ನು   ಮೊದಲೇ ತಿಳಿಸಲಾಗಿತ್ತು.  
 
ಈಗ ಮಾಸ್ ಐಕಾನ್ ರಾಜ್ ಬಿ ಶೆಟ್ಟಿ ಅವರು ಈ ಚಿತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ನಿರ್ಮಾಪಕರು ತಿಳಿಸಿದ್ದಾರೆ. 
 
ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರ ಅಭಿನಯ ಹಾಗೂ ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರ ಆರಂಭದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಬಹು ನಿರೀಕ್ಷಿತ ಈ ಚಿತ್ರ  ಕಲಾರಸಿಕರಿಗೆ ಮನೋರಂಜನೆಯ ರಸದೌತಣ ನೀಡುವುದಂತೂ ಖಚಿತ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed