ಆರಂಭವಾಯಿತು ನವರಸನ್ ಸಾರಥ್ಯದ ``MMB LAGACY``
Posted date: 20 Sun, Nov 2022 09:49:55 PM
ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಚಿತ್ರಗಳ ಇವೆಂಟ್ ಗಳನ್ನು ನಡೆಸಿಕೊಂಡು ಬರುತ್ತಿರುವ ನವರಸನ್, ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಮಾಗಡಿ ರಸ್ತೆಯ ಜಿ.ಟಿ‌ ಮಾಲ್ ನ ನಾಲ್ಕನೇ ಮಹಡಿಯಲ್ಲಿ "MMB LAGACY" ಎಂಬ ಸುಂದರ ಸಭಾಂಗಣವನ್ನು ಆರಂಭಿಸಿದ್ದಾರೆ. ‌ಇತ್ತೀಚೆಗೆ ಇದರ ಉದ್ಘಾಟನೆ ನೆರವೇರಿತು.
 
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟ ವಿನೋದ್ ಪ್ರಭಾಕರ್, ನಿಶಾ ವಿನೋದ್ ಪ್ರಭಾಕರ್, ಖ್ಯಾತ ಗಾಯಕ ಅಲೋಕ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ನಟ ತಬಲ‌ನಾಣಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನವರಸನ್ "MMB LAGACY" ಕುರಿತು ಮಾಹಿತಿ ನೀಡಿದರು.
 
ನಾನು ಮೈ ಮೂವೀ ಬಜಾರ್ ಮೂಲಕ ಕೆಲವು ವರ್ಷಗಳಿಂದ ಸಾಕಷ್ಟು ಚಿತ್ರಗಳ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆದಿದೆ. ಅಲ್ಲಿ ಊಟದ ವೆಚ್ಚ ಸಾವಿರ, ಎರಡು ಸಾವಿರ ಹೀಗಿರುತ್ತದೆ. ಅಲ್ಲಿ ಒಂದು ಸಮಾರಂಭ ಮಾಡಲು ನಾಲ್ಕೈದು ಲಕ್ಷ ಖರ್ಚಾಗುತ್ತದೆ. ಎಲ್ಲಾ‌ ನಿರ್ಮಾಪಕರಿಗೂ ಅಷ್ಟು ಖರ್ಚು ಮಾಡವುದಕ್ಕೆ ಆಗುವುದಿಲ್ಲ. ಹಾಗಾಗಿ ನಾನು ಕೆಲವು ಸ್ನೇಹಿತರೊಂದಿಗೆ ಚರ್ಚಿಸಿ, ನಿರ್ಮಾಪಕರಿಗೆ ಅನುಕೂಲವಾಗುವಂತಹ ಒಂದು ವಿಶಾಲವಾದ ಸಭಾಂಗಣ ತೆರೆಯಲು ತೀರ್ಮಾನಿಸಿದೆ.  ಸ್ಥಳ ಹುಡುಕುತ್ತಿದ್ದಾಗ ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್ ಅವರು ನಿಮಗೆ ಅನುಕೂಲವಾದರೆ, ಈ ಸ್ಥಳದಲ್ಲೇ ಆರಂಭಿಸಿ ಎಂದರು. ಕಳೆದ ಆರು ತಿಂಗಳಿನಿಂದ ಸುಮಾರು ಮೂರುವರೆ ಕೋಟಿಗೂ ಅಧಿಕ ಖರ್ಚಿನಲ್ಲಿ "MMB LAGACY" ಯನ್ನು ನಿರ್ಮಾಣ ಮಾಡಿದ್ದೇನೆ. ಈ ಜಾಗ ಯಾವುದೇ ಫೈವ್ ಸ್ಟಾರ್ ಹೋಟೆಲ್ ಗೆ ಕಡಿಮೆ ಇಲ್ಲದಂತೆ ನಿರ್ಮಾಣವಾಗಿದೆ. ಆಧುನಿಕ ಸೌಂಡ್ ಸಿಸ್ಟಮ್, ಎಲ್ ಇ ಡಿ, ನವೀನವೀನ ಲೈಟಿಂಗ್ ವ್ಯವಸ್ಥೆ ಎಲ್ಲವೂ ಇಲ್ಲಿ ಲಭ್ಯವಿದೆ. ನಿರ್ಮಾಪಕರಿಗೆ ಹೊರೆಯಾಗದಂತೆ ದರವನ್ನು ನಿಗದಿ ಪಡಿಸಿದ್ದೇವೆ. ಪತ್ರಿಕಾಗೋಷ್ಠಿ, ಆಡಿಯೋ, ಟೀಸರ್, ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಪ್ರೀ ರಿಲೀಸ್ ಇವೆಂಟ್ ಮುಂತಾದ ಸಮಾರಂಭಗಳನ್ನು ಇಲ್ಲಿ ನಡೆಸಬಹುದು. ಸುಮಾರು 200ಜನ ಆರಾಮವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುಬಹುದು. ಸುಸಜ್ಜಿತ ಸಭಾಂಗಣ, ಊಟದ ಹಾಲ್ ಇದೆ. ಊಟ, ತಿಂಡಿ ಹಾಗೂ ಸಾಭಾಂಗಣದ ವೆಚ್ಚ ಎಲ್ಲವೂ ಕೈಗೆಟುಕುವ ಬೆಲೆಯಲ್ಲೇ ನಿಗದಿ ಮಾಡಲಾಗಿದೆ. ಸಿನಿಮಾ ಕಾರ್ಯಕ್ರಮಗಳಲ್ಲದೆ ಹುಟ್ಟುಹಬ್ಬ ಮುಂತಾದ ಕಾರ್ಯಕ್ರಮಗಳನ್ನು ಇಲ್ಲಿ ಮಾಡಿಕೊಳ್ಳಬಹುದು. ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ ಅನುಕೂಲವಾಗಲೆಂದೆ ತೆರೆದಿರುವ "MMB LAGACY" ಯನ್ನು ತಾವೆಲ್ಲರು ಬಳಸಿಕೊಳ್ಳಬೇಕೆಂದು ನವರಸನ್ ಮನವಿ ಮಾಡಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed