ನವೆಂಬರ್ 14 ರಂದು``ಸ್ಪೂಕಿ ಕಾಲೇಜ್``ಚಿತ್ರದ ``ಮೆಲ್ಲುಸಿರೆ ಸವಿಗಾನ``ಹಾಡು ಬಿಡುಗಡೆ
Posted date: 08 Tue, Nov 2022 08:13:00 PM
ಕ್ರಿಯಾಶೀಲ ನಿರ್ದೇಶಕ ಭರತ್ ಜಿ ನಿರ್ದೇಶಿಸಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗುತ್ತಿದೆ. ಧಾರವಾಡದ ಶತಕಕ್ಕೂ ಮೀರಿದ ಇತಿಹಾಸವಿರುವ ಪುರಾತನ ಕಾಲೇಜಿನಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ದಾಂಡೇಲಿ ಅಭಯಾರಣ್ಯದಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಡೆದಿದೆ. 

ಟೀಸರ್ ಮೂಲಕ ಈಗಾಗಲೇ ಜನಮನ ಗೆದ್ದಿರುವ "ಸ್ಪೂಕಿ ಕಾಲೇಜ್" ಚಿತ್ರದಲ್ಲಿ ಡಾ||ರಾಜಕುಮಾರ್ ಅಭಿನಯದ "ವೀರಕೇಸರಿ" ಚಿತ್ರದ ಜನಪ್ರಿಯ "ಮೆಲ್ಲುಸಿರೆ ಸವಿಗಾನ" ಹಾಡನ್ನು ಬಳಸಿಕೊಳ್ಳಲಾಗಿದೆ.‌ ಈ ಹಾಡಿಗೆ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.   ಈ ಹಾಡು ಇದೇ ನವೆಂಬರ್ 14ರಂದು ಬಿಡುಗಡೆಯಾಗಲಿದೆ.  

ಭೂಷಣ್ ಅವರ ನೃತ್ಯ ನಿರ್ದೇಶನದಲ್ಲಿ, 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ, ಅದ್ಭುತವಾದ ಸೆಟ್ ನಲ್ಲಿ ಈ ಹಾಡು ಚಿತ್ರೀಕರಣವಾಗಿದೆ.

"ರಂಗಿತರಂಗ" , "ಅವನೇ ಶ್ರೀಮನ್ನಾರಾಯಣ" ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

  ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ
ಭರತ್ ಅವರೆ ಬರೆದಿದ್ದಾರೆ. 

ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ. 

 "ಪ್ರೀಮಿಯರ್ ಪದ್ಮಿನಿ" ಖ್ಯಾತಿಯ ವಿವೇಕ್ ಸಿಂಹ "ಸ್ಪೂಕಿ ಕಾಲೇಜ್" ನ ನಾಯಕ. "ದಿಯಾ" ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ "ಕಾಮಿಡಿ ಕಿಲಾಡಿಗಳು" ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed