ಪೋಸ್ಟರ್ ಬಿಡುಗಡೆ ಮಾಡಿ ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ``ಕೈಮರ``ತಂಡ
Posted date: 14 Mon, Nov 2022 09:38:09 AM
ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ" ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನವೆಂಬರ್ 12,  ಪ್ರಿಯಾಂಕ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ "ಕೈಮರ" ಚಿತ್ರತಂಡ ಪ್ರಿಯಾಂಕ ಉಪೇಂದ್ರ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬ ಶುಭಾಶಯ ತಿಳಿಸಿದೆ.

 ವಿ.ಮತ್ತಿಯಳಗನ್ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್, ಮತ್ತಿಯಳಗನ್ ಮುಂತಾದವರು  ನಟಿಸುತ್ತಿದ್ದಾರೆ. 

 "ಕೈಮರ" ಚಿತ್ರದ ಕಥೆಯನ್ನು ಪಿ. ವಿಮಲ್ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ "ಕೈಮರ" ದಲ್ಲಿರಲಿದೆ.‌
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed