ಫೆಬ್ರವರಿ 9ರಂದು ತೆರೆಗಾಣಲಿದೆ `ನಗುವಿನ ಹೂಗಳ ಮೇಲೆ`
Posted date: 06 Tue, Feb 2024 10:19:39 AM
ವೆಂಕಟ್ ಭಾರದ್ವಾಜ್ ನಿರ್ದೇಶನದ `ನಗುವಿನ ಹೂಗಳ ಮೇಲೆ’ ಚಿತ್ರ ಇದೇ ಫೆಬ್ರವರಿ 9ರಂದು ತೆರೆಗಾಣಲಿದೆ. ಅಭಿ ದಾಸ್ ಮತ್ತು ಶರಣ್ಯಾ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿರುವ ಈ ಚಿತ್ರ ಈಗಾಗಲೇ ಹಾಡುಗಳು, ಟ್ರೈರಲ್ ಸೇರಿದಂತೆ ನಾನಾ ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಭಿನ್ನ ಪ್ರೇಮಕಥಾನಕದ ಸ್ಪಷ್ಟ ಸುಳಿವಿನೊಂದಿಗೆ ಭರವಸೆ ಮೂಡಿಸಿರುವ ನಗುವಿನ ಹೂಗಳ ಮೇಲೆ ಸಾಕಷ್ಟು ಹೊಸತನಗಳ ಪರಾಗ ಮೆತ್ತಿಕೊಂಡಂತಿದೆ.
 
ಈ ಹಿಂದೆ ಆಮ್ಲೆಟ್, ಕೆಂಪಿರ್ವೆ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದಿರುವವರು ವೆಂಕಟ್ ಭಾರದ್ವಾಜ್. ಅವರು ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ, ಎಲ್ಲ ವಯೋಮಾನದವರನ್ನೂ, ಎಲ್ಲ ತೆರನಾದ ಅಭಿರುಚಿಯ ಪ್ರೇಕ್ಷಕರನ್ನೂ ಅಚ್ಚರಿಗೀಡುಮಾದಲು ಸಜ್ಜಾಗಿದ್ದಾರೆ. 

ಕನ್ನಡ ಭಾಷೆ ಮೇಲೆ ಅಭಿಮಾನವಾಗಿ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನದೊಂದಿಗೆ ನಗುವಿನ ಹೂಗಳ ಮೇಲೆ ರೂಪುಗೊಂಡಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed