ಸೇನಾಪುರಕ್ಕೆ ಗಾಯಕಿ ಅನನ್ಯ ಭಟ್ ಹಿರೋಯಿನ್
Posted date: 28 Tue, Sep 2021 05:16:31 PM
ಅಕ್ರಮ ಗಣಿ ಧಣಿಗಳ ಸತ್ಯ ಘಟನೆಗಳು ಒಂದು ಕಾಲಘಟ್ಟದಲ್ಲಿ ಅಕ್ರಮ ಗಣಿ ದಂಧೆ ರಾಜ್ಯಾದ್ಯಂತ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿತ್ತು. ಬಿಸಿಲು ನಾಡಿನ ಒಡಲಲ್ಲಿ ನಡೆದಿದ್ದ, ದಂಧೆಯ ಕಬಂಧ ಬಾಹುಗಳು ಕರಾವಳಿಯ ಕಿನಾರೆಗಳವರೆಗೂ ಮೈಚಾಚಿಕೊಂಡಿತ್ತು. ಇಂತಹ ವಿದ್ಯಾಮಾನಗಳ ಸುತ್ತ ನಡೆದಂತ ಒಂದಷ್ಟು ನೈಜ ಅಂಶಗಳನ್ನು ’ಸೇನಾಪುರ’ ಚಿತ್ರದಲ್ಲಿ ಬಳಸಲಾಗಿದೆ. ಕತೆ ಬರೆದು ನಿರ್ದೇಶನ ಮಾಡಿರುವುದು ಕುಂದಾಪುರದ ನವ ಪ್ರತಿಭೆ ಗುರುಸಾವನ್. ಇವರು ಹೇಳುವಂತೆ ಮೊದಲು ವೆಬ್‌ಸೀರೀಸ್‌ಗೆ ಅಂತಲೇ ಮಾಡಲು ಚಿಂತನೆ ನಡೆಸಲಾಗಿತ್ತು. ಮುಂದೆ ಅದು ಚಿತ್ರವಾಗಿ ರೂಪಾಂತರಗೊಂಡಿತು. ಸಮಾಜ ಮತ್ತು ಪ್ರಕೃತಿ ಎಲ್ಲರಿಗೂ ಎಲ್ಲವನ್ನು ಸಮನಾಗಿ ನೀಡಿರುತ್ತದೆ. ಇವನು ಶ್ರೀಮಂತ, ಬಡವ ಎಂದು ಬೇಧಬಾವ ತೋರಿಸುವುದಿಲ್ಲ. ನಾವುಗಳನ್ನು ಅದನ್ನು ವರ್ಗ ಮಾಡಿಕೊಂಡು ಬದುಕುತ್ತಿದ್ದೇವೆ. ಪ್ರಕೃತಿ, ಸಮಾಜ, ಭೂಮಿ, ನೀರು ಅಂತ ಬಂದಾಗ ನಾವು ಹೆಣ್ಣಿಗೆ ಗೌರವ ಕೊಡುತ್ತೇವೆ. ಅದಕ್ಕಾಗಿ ಆಕೆಯಿಂದಲೇ ಕತೆಯನ್ನು ಹೇಳಿಸಲು ಪ್ರಯತ್ನ ಮಾಡಲಾಗಿದೆ ಎನ್ನುತ್ತಾರೆ. 

ಖ್ಯಾತ ಗಾಯಕಿ, ರಂಗಭೂಮಿ ಹಿನ್ನಲೆಯಿರುವ ಅನನ್ಯ ಭಟ್ ಮೊದಲ ಬಾರಿ ಮಹಿಳಾ ಪ್ರಧಾನ ಕತೆಯಲ್ಲಿ ಮುಖ್ಯ ಪಾತ್ರವನ್ನು ನಿಭಾಯಿಸಿರುವುದರ ಜೊತೆಗೆ ಎರಡು ಹಾಡುಗಳಿಗೆ ಸಂಗೀತದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಚಿತ್ರೀಕರಣ ಅನುಭವಗಳನ್ನು ಹಂಚಿಕೊಂಡು, ಟೀಸರ್‌ದಲ್ಲಿ ಹಿನ್ನಲೆ ಧ್ವನಿ ನೀಡಿದ್ದು ಛಾಲೆಂಜಿಂಗ್ ಆಗಿತ್ತು ಎಂದರು.
                  
 ಕೆಲವು ಭಾವನೆಗಳ ಹೋರಾಟಗಳು, ಅಸಹನೆಯ ಯುದ್ದವು ಇದೆ. ಶಕ್ತರ ಹೊಡೆತ ಪವರ್‌ಫುಲ್ ಆಗಿರುತ್ತೆ. ಅದರೆ ಹಸಿದವರ ಹೊಡೆತ ರೆಬೆಲ್ ಆಗಿರುತ್ತೆ. ಶಕ್ತ-ಅಶಕ್ತರ ನಡುವಿನ ರಣರಂಗವೇ ’ಸೇನಾಪುರ’ ಎನ್ನುವ ಡೈಲಾಗ್ ಟೀಸರ್‌ದಲ್ಲಿ ಸುಂದರವಾಗಿ ಮೂಡಿ ಬಂದಿದೆ. ಅಮಿತ್‌ ಕುಮಾರ್ ಮತ್ತು ರಾಹುಲ್‌ ದೇವ್ ಜಂಟಿಯಾಗಿ ವಿಮ್‌ಲಾಸ್ ಎಂಟರ್‌ಟೈನ್‌ಮೆಂಟ್ ಹಾಗೂ ಅಂಸ ಕ್ರಿಯೇಶನ್ಸ್ ಮೂಲಕ ಬಂಡವಾಳ ಹೂಡಿರುವುದು ಹೊಸ ಅನುಭವ. 
 
ತಾರಾಂಗಣದಲ್ಲಿ ದಿನೇಶ್‌ ಮಂಗಳೂರು, ಬಿ.ಎಂ.ಗಿರಿರಾಜ್, ಸಿಂಧೂ, ಶೇಖರ್‌ರಾಜ್, ರೀನ, ಅಮೂಲ್ಯ, ಪರಮೇಶ್ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ಪ್ರಶಾಂತ್‌ಸಾಗರ್, ಅರ್ಜುನ್ ಸಂಕಲನ, ಪ್ರಮೋದ್‌ ಮರವಂತೆ ಸಾಹಿತ್ಯ, ಅರ್ಜುನ್‌ ಶ್ರೀನಿವಾಸಯ್ಯ ಸಂಕಲನವಿದೆ. ಮಂಗಳೂರು, ಸಂಪೆಕಟ್ಟೆ ತಾಣದಲ್ಲಿ ಚಿತ್ರೀಕರಣ ನಡೆಸಿ, ಸದ್ಯ ಸಿನಿಮಾವು ಡಬ್ಬಿಂಗ್‌ದಲ್ಲಿ ಬ್ಯುಸಿ ಇದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed