ಓ ಮೈ ಲವ್ ಚಿತ್ರಕ್ಕೆ ಏನಾಯ್ತೋ ಕಾಣೆ ಹಾಡಿನ ಚಿತ್ರೀಕರಣ
Posted date: 20 Wed, Oct 2021 06:00:05 PM
ಜಿಸಿಬಿ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಕಥೆ ಬರೆದು ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಓ ಮೈ ಲವ್ ಚಿತ್ರಕ್ಕೆ ಕಳೆದ ವಾರ ವಿ. ನಾಗೇಂದ್ರ ಪ್ರಸಾದ್ ರಚಿಸಿದ "ಏನಾಯ್ತೋ ಕಾಣೆ.. ಏನಾಯ್ತೋ ಕಾಣೆ, ತಂಗಾಳಿ ಸುರಿದಂತೆ ತಂಪಾದೆ ನಾನು…”ಎನ್ನುವ ಹಾಡನ್ನು ವಿ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ನಾಯಕ ಅಕ್ಷಿತ್ ಶಶಿಕುಮಾರ್, ನಾಯಕಿ ಕೀರ್ತಿ ಕಲ್ಕರೆ, ದೀಪಿಕಾ ಆರಾದ್ಯ , ಅಕ್ಷತಾ ,ಶೌರ್ಯ. ಸುವೇದ್ ಅಭಿನಯಿಸಿದ ಹಾಡನ್ನು ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಚಿತ್ರೀಕರಿಸಲಾಯಿತು. ಈ ಹಾಡಿನೊಂದಿಗೆ ಚಿತ್ರದ ಶೇ.‌90 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಉಳಿದ ಮೂರು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ.
ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಈ ಚಿತ್ರಕ್ಕೆ ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ಚಿತ್ರಕತೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದೊಂದು ಲವ್‍ಸ್ಟೋರಿ ಆಗಿದ್ದರೂ ಕಾಮಿಡಿ, ಸೆಂಟಿಮೆಂಟ್ ಜೊತೆಗೆ ಭರ್ಜರಿ ಆಕ್ಷನ್‍ಗೂ ಅಷ್ಟೇ ಪ್ರಾಮುಖ್ಯತೆ ನೀಡಲಾಗಿದೆ. 
ಚಿತ್ರದಲ್ಲಿ ಹಿರಿಯ ನಿರ್ದೇಶಕ ಎಸ್.ನಾರಾಯಣ್ ಹಾಗೂ ತೆಲುಗು ಖಳನಟ ದೇವ್‍ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವುದು ಅಲ್ಲದೆ ಜಿ.ರಾಮಾಂಜಿನಿ ಅವರಂಥ ಸದಭಿರುಚಿಯ ನಿರ್ಮಾಪಕರು ಹಾಗೂ ಪಾತ್ರಕ್ಕೆ ನ್ಯಾಯ ಒದಗಿಸುವಂಥ ಕಲಾವಿದರು ಸಿಕ್ಕಿರುವುದು ನನ್ನ ಅದೃಷ್ಟ ಎನ್ನುತ್ತಾರೆ ನಿರ್ದೇಶಕ ಸ್ಮೈಲ್ ಶ್ರೀನು. 
ಚಿತ್ರದ ಕಥೆ ಹಾಗೂ ನಿರೂಪಣೆಗೆ ಒತ್ತು ಕೊಡುವುದರೊಂದಿಗೆ ಹೊಸ ಪ್ರತಿಭೆಗಳನ್ನು ಹಾಕಿಕೊಂಡು ಸಿನಿಮಾ ಮಾಡುತ್ತಿರುವ ಸ್ಮೈಲ್ ಶ್ರೀನು ಈ ಸಲವೂ ಹೊಸಬರ ಜೊತೆ ಅನುಭವಿ ಕಲಾವಿದರನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದಾರೆ. 
ಇನ್ನು ಈ ಚಿತ್ರಕ್ಕೆ ಚರಣ್ ಅರ್ಜುನ್ ಅವರ ಸಂಗೀತ, ಹಾಲೇಶ್ ಎಸ್. ಅವರ ಛಾಯಾಗ್ರಹಣ, ರಿಯಲ್ ಸತೀಶ್ ಅವರ ಸಾಹಸ, ಡಾ.ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿ ಅವರ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ. ಹಿರಿಯ ನಿರ್ದೇಶಕ ಎಸ್.ನಾರಾಯಣ್, ಅಕ್ಷಿತ್ ಶಶಿಕುಮಾರ್, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಸಾಧುಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ, ಶಿಲ್ಪಾ, ರವಿ ರಾಮ್‍ಕುಮಾರ್ ಹಾಗೂ ಇತರರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed