ಇದೇ ಶುಕ್ರವಾರ ರಾಜ್ಯಾದ್ಯಂತ ``ಕೌಟಿಲ್ಯ``ನ ಆಗಮನ.
Posted date: 24 Wed, Aug 2022 08:30:33 AM
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ``ಬಿಗ್ ಬಾಸ್`` ಖ್ಯಾತಿಯ ಅರ್ಜುನ್ ರಮೇಶ್ ನಟನೆ ‌. 

ಓಟಿಟಿ ``ಬಿಗ್ ಬಾಸ್`` ನಲ್ಲಿ ಪಾಲ್ಗೊಂಡಿದ್ದ ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ ``ಕೌಟಿಲ್ಯ``ಚಿತ್ರ ಇದೇ ಶುಕ್ರವಾರ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿದೆ..

ವಿಭಿನ್ನ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ನೀವು, ಆರಂಭದಿಂದಲೂ ನೀಡುತ್ತಿರುವ ಪ್ರೋತ್ಸಾಹಕ್ಕೆ ನನ್ನ ಧನ್ಯವಾದ. ಈಗಾಗಲೇ ಬಿಡುಗಡೆಯಾಗಿರುವ ನಮ್ಮ ಚಿತ್ರದ ಟ್ರೇಲರ್ ಪ್ರೇಕ್ಷಕರ ಮನ ತಲುಪಿದೆ. ರಕ್ಷಿತ್ ಶೆಟ್ಟಿ, ನಿರ್ದೇಶಕ ಸೂರಿ ಸೇರಿದಂತೆ ಸಾಕಷ್ಟು ಗಣ್ಯರು ಸಹ ಟ್ರೇಲರ್ ಬಗ್ಗೆ ಉತ್ತಮ ಮಾತುಗಳಾಡಿದ್ದಾರೆ. ಇದೇ ಶುಕ್ರವಾರ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಪ್ರಭಾಕರ್ ಶೇರಖಾನೆ ತಿಳಿಸಿದರು.

ನಾನು ಈ ಹಿಂದೆ ``ಶನಿ`` ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾಗಿನಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆದಿದೆ. ನನ್ನದು ಈ ಚಿತ್ರದಲ್ಲಿ ಆರ್ಕಿಟೆಕ್ಟ್ ಇಂಜಿನಿಯರ್‌ ಪಾತ್ರ. ಒಬ್ಬ ಇಂಜಿನಿಯರ್ ಚಾಣಕ್ಯನ ತಂತ್ರಗಳನ್ನು ಯಾವ ರೀತಿ ಬಳಸಿಕೊಳ್ಳುತ್ತಾನೆ ಎನ್ನುವುದನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ನಾಯಕ ಅರ್ಜುನ್ ರಮೇಶ್ ತಮ್ಮ ಪಾತ್ರ‌ ಹಾಗೂ ಚಿತ್ರದ ಕುರಿತು ಮಾತನಾಡಿದರು.

ನಾನು ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ನನ್ನನ್ನು ಧಾರಾವಾಹಿಗಳಲ್ಲಿ ಮುಗ್ಧ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಇದರಲ್ಲಿ ಒಬ್ಬರೂ ಬಯ್ದರೆ ವಾಪಸ್ ಬಯ್ಯುವ ಹುಡುಗಿ ನಾನು. ವಿಭಿನ್ನ ಪಾತ್ರ ನೀಡಿರುವ ನಿರ್ದೇಶಕರಿಗೆ ಧನ್ಯವಾದ ಎನ್ನುತ್ತಾರೆ ನಾಯಕಿ ಪ್ರಿಯಾಂಕ ಚಿಂಚೋಳಿ.

ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ನಿರ್ಮಾಪಕ ವಿಜೇಂದ್ರ.ಬಿ.ಎ ವಿಶೇಷ ಧನ್ಯವಾದಗಳನ್ನು ತಿಳಿಸಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed