ಕೊನೇ ಹಂತದಲ್ಲಿ ಎವಿಡೆನ್ಸ್
Posted date: 18 Tue, Oct 2022 10:02:25 AM
ಶ್ರೀಧೃತಿ ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಕೊಡ್ಲಾಡಿ ಸುರೇಂದ್ರಶೆಟ್ಟಿ ಅವರು ಅರ್ಪಿಸಿ, ಶ್ರೀನಿವಾಸ್‌ಪ್ರಭು, ಕೆ.ಮಾದೇಶ್ (ಕೊಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಸೇರಿ ನಿರ್ಮಿಸುತ್ತಿರುವ "ಎವಿಡೆನ್ಸ್" ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಆಕ್ಷನ್‌ಕಟ್ ಹೇಳಿದ್ದಾರೆ. ಅರವಿಂದ್ ಅಚ್ಚು, ಎಂ.ಎನ್.ರವೀಂದ್ರ ರಾವ್ (ದೂರದರ್ಶನ), ಪ್ರಶಾಂತ್ ಸಿ.ಪಿ. ರಮೇಶ್ ಕೆ, ಕಿಶೋರ್‌ಬಾಬು ಮತ್ತು ನರಸಿಂಹಮೂರ್ತಿ ಚಿತ್ರದ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ವಿಷುಯಲ್ ಮ್ಯಾಜಿಕ್ ಸ್ಟುಡಿಯೋದಲ್ಲಿ ಈ ಚಿತ್ರದ ಕೊನೆಯಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಹಾಡುಗಳು ಮತ್ತು ಟೀಸರ್, ಟ್ರೈಲರನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. 
 
ಕ್ರೈಮ್, ಸಸ್ಪೆನ್ಸ್ , ಥ್ರಿಲ್ಲರ್ ಜೊತೆಗೆ ತ್ರಿಕೋನ ಪ್ರೇಮಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ನೆಲಮಂಗಲ ಹೊರವಲಯದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಪ ಈ ಚಿತ್ರದಲ್ಲಿ ಜೋಶ್ ಖ್ಯಾತಿಯ ರೋಬೊ ಗಣೇಶನ್ ನಾಯಕನಾಗಿ ನಟಿಸಿದ್ದಾರೆ. ಕಿರಗೂರಿನ ಗಯ್ಯಾಳಿಗಳು ಖ್ಯಾತಿಯ ಮಾನಸ ಜೋಶಿ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದ 
ಪಾತ್ರಗಳಲ್ಲಿ ಆಕರ್ಷ್ ಆದಿತ್ಯ, ರಚಿತಾ, ಪೂಜಿತ ಬೋಬೆಗೌಡ, ಚಮಕ್‌ಚಂದ್ರ, ಪವನ್‌ಸುರೇಶ್, ಶಶಿಧರಕೋಟೆ, ಕಾರ್ತಿಕ್ ವರ್ಣೇಕರ್, ಮನಮೋಹನ್ ರೈ, ರೇಣು ಶಿಕಾರಿ, ಆರಾಧ್ಯ ಶಿವಕುಮಾರ್ ಮುಂತಾದವರು ನಟಿಸಿದ್ದಾರೆ. 
 
ಈ ಚಿತ್ರದಲ್ಲಿ ೪ ಹಾಡುಗಳಿದ್ದು, ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವಾಗಿ ಹಾಡೊಂದಕ್ಕೆ "ಸ ರಿ ಪ" ಎನ್ನುವ ಮೂರೇ ಸ್ವರದಲ್ಲಿ ರಾಗ ಸಂಯೋಜನೆ ಮಾಡುವ ಜೊತೆಗೆ 2  ಹಾಡಿನ ಸಾಹಿತ್ಯವನ್ನೂ ಬರೆದಿದ್ದಾರೆ. ಉಳಿದಂತೆ ಡಾ.ವಿ.ನಾಗೇಂದ್ರಪ್ರಸಾದ್ ಮತ್ತು ಪ್ರವೀಣ್‌ ರಾಮಕೃಷ್ಣ ಸಾಹಿತ್ಯ ರಚಿಸಿದ್ದಾರೆ. ಹನುಮಯ್ಯ ಬಂಡಾರು ಮತ್ತು ಆರ್. ಚಂದ್ರಶೇಖರ ಪ್ರಸಾದ್ ಅವರ ಸಂಭಾಷಣೆ, ರವಿ ಸುವರ್ಣ ಅವರ ಛಾಯಾಗ್ರಹಣ, ಶೇಷಾಚಲ ಕುಲಕರ್ಣಿ ಅವರ ಸಂಕಲನ, ಕರಿಯ ನಂದ ಮತ್ತು ರಘು ಆರ್.ಜೆ. ನೃತ್ಯ ನಿರ್ದೇಶನ, ಜಾನಿ ಮಾಸ್ಟರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed