ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ``ಗ್ರಾಮಾಯಣ``
Posted date: 12 Mon, Jun 2023 07:50:25 AM
ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
 
"ಗ್ರಾಮಾಯಣ" ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ.
 
ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ದೇವನೂರು ಚಂದ್ರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed