ಸುಂದರ ಶೀರ್ಷಿಕೆಯ ``ಕೌಸಲ್ಯಾ ಸುಪ್ರಜಾ ರಾಮ`` ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ
Posted date: 16 Sun, Oct 2022 08:05:55 PM
ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.

"ಕೌಸಲ್ಯಾ ಸುಪ್ರಜಾ ರಾಮ" ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಹೆಸರೆ ಹೇಳುವಂತೆ ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಸೆಂಟಿಮೆಂಟ್ ಎರಡು ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ. ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದು, ಅವರ ತಾಯಿ - ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯತಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿರುತ್ತಾರೆ. ಅದರಲ್ಲಿ ಒಬ್ಬರು ಹೊಸಬರು.  ಸದ್ಯದಲ್ಲೇ ನಾಯಕಿಯರ ಪರಿಚಯ ಮಾಡಿಸಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ನಮ್ಮ ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಾನು ಬಿ.ಸಿ.ಪಾಟೀಲ್ ಅಭಿನಯದ "ಕೌರವ" ಚಿತ್ರದಲ್ಲಿ ಎಸ್ ಮಹೇಂದರ್ ಅವರ ಬಳಿ ಕೆಲಸ ಮಾಡಿದ್ದೆ. ಆಗಿನಿಂದಲೂ ಬಿ.ಸಿ.ಪಾಟೀಲ್ ಅವರು ಪರಿಚಯ. ಈಗ ಅವರ ಜೊತೆ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ಶಶಾಂಕ್.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed