ಪುನೀತ್ ಪ್ರಭುದೇವ ಅಭಿನಯದ ಲಕ್ಕಿಮ್ಯಾನ್ ಆಗಸ್ಟ್ ನಲ್ಲಿ ತೆರೆಗೆ
Posted date: 13 Wed, Jul 2022 10:14:20 PM
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ  ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ  ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ ತಮಿಳುನಟ  ಪ್ರಭುದೇವಾ ಕೂಡ ನಟಿಸಿದ್ದು, ಹಾಡೊಂದರಲ್ಲಿ ಇವರಿಬ್ಬರೂ ಸಖತ್ ಸ್ಟೆಪ್ ಹಾಕಿದ್ದಾರೆ. ನಾನಾ ನೀನಾ ಎನ್ನುವ ಹಾಗೆ ಇಬ್ಬರೂ ಸೇರಿ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಭರ್ಜರಿ ಡ್ಯಾನ್ಸ್ ಮಾಡಿರುವ ಈ ಹಾಡು ಈಗಾಗಲೇ  ಎಲ್ಲೆಡೆ  ವೈರಲ್ ಆಗಿದೆ.  ಜಾನಿ ಮಾಸ್ಟರ್  ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ.  ಇದೇ ಮೊದಲಬಾರಿಗೆ ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವಾ ಅವರು ಒಂದೇ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರಲ್ಲದೆ, ಅದ್ಭುತವಾದ ಹಾಡೊಂದರಲ್ಲಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.  
       
ಇನ್ನು ಈ ಚಿತ್ರವನ್ನು ಮೊದಲಬಾರಿಗೆ ಪ್ರಭುದೇವಾ ಸಹೋದರ ನಾಗೇಂದ್ರಪ್ರಸಾದ್ ಅವರು ನಿರ್ದೇಶಿಸಿದ್ದಾರೆ. ಈಗಾಗಲೇ ತನ್ನ  ಪೋಸ್ಟ್ ಪ್ರೊಡಕ್ಷನ್ ಕೊಲಸಗಳನ್ನೆಲ್ಲಾ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಲಕ್ಕಿಮ್ಯಾನ್ ಚಿತ್ರವನ್ನು ಬರುವ ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ನಿರ್ಮಾಪಕರು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.
       ‌‌
ತಮಿಳಿನ ಓ ಮೈ ಕಡವುಲೆ ಚಿತ್ರದ  ಎಳೆಯನ್ನಿಟ್ಟುಕೊಂಡು ನಿರ್ದೇಶಕ ನಾಗೇಂದ್ರಪ್ರಸಾದ್ ಅವರು ಒಂದು ಅದ್ಭುತವಾದ  ಫ್ಯಾಂಟಸಿ ಡ್ರಾಮಾ ಕಥಾಹಂದರವನ್ನು ಲಕ್ಕಿ ಮ್ಯಾನ್ ಚಿತ್ರದಲ್ಲಿ ನಿರೂಪಿಸಿದ್ದಾರೆ. ನಿರ್ಮಾಪಕ ಪಿ.ಆರ್. ಮೀನಾಕ್ಷಿ ಸುಂದರಂ, ಪಿ.ಕಾಮರಾಜ್ ಅವರು ತಮಿಳಲ್ಲಿ ಹಲವಾರು ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕನ್ನಡದಲ್ಲಿ ಇದು ಅವರ ಮೊದಲ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ  ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed