ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ ``ಬಘೀರ`` ಆರಂಭ.
Posted date: 20 Fri, May 2022 03:33:01 PM
ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ "ಕೆ ಜಿ ಎಫ್ ೨" ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್  ನಿರ್ಮಾಣದ ``ಬಘೀರ`` ಚಿತ್ರಕ್ಕೆ ಚಾಲನೆ ದೊರಕಿದೆ.

ಡಾ||ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿದ್ದಾರೆ‌.

``ಬಘೀರ`` ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜ ಅವರು ಕ್ಯಾಮೆರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ||ಸೂರಿ ನಿರ್ದೇಶನ ಮಾಡುತ್ತಿದ್ದಾರೆ‌.
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ ಜೆ ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಈ ಹಿಂದೆ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ  ಶ್ರೀಮುರಳಿ ನಾಯಕರಾಗಿ ನಟಿಸಿದ್ದ "ಉಗ್ರಂ" ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈ ಚಿತ್ರಕ್ಕೂ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಚಿತ್ರಕಥೆ ನಿರ್ದೇಶಕ ಡಾ||ಸೂರಿ ಅವರದು.
 ಹಿಂದೆ ಬಿಡುಗಡೆಯಾಗಿದ್ದ "ಬಘೀರ" ಚಿತ್ರದ ಫಸ್ಟಲುಕ್ ಗೆ ಶ್ರೀಮುರಳಿ  ಅಭಿಮಾನಿಗಳು ಫಿದಾ ಆಗಿದ್ದರು. ಈಗ ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರದಲ್ಲಿದ್ದಾರೆ. 

ಶ್ರೀಮುರಳಿ ``ಬಘೀರ`` ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed