ಅದ್ದೂರಿ ಹಾಡಿನೊಂದಿಗೆ ``ಶಂಭೋ ಶಿವ ಶಂಕರ`` ಚಿತ್ರದ ಚಿತ್ರೀಕರಣ ಮುಕ್ತಾಯ
Posted date: 17 Fri, Dec 2021 11:25:31 AM
ವರ್ತೂರು ಮಂಜು ನಿರ್ಮಾಣದ ,  ಶಂಕರ್ ಕೋನಮಾನಹಳ್ಳಿ ನಿರ್ದೇಶನದ ``ಶಂಭೋ ಶಿವ ಶಂಕರ`` ಚಿತ್ರಕ್ಕಾಗಿ ಗೌಸ್ ಫಿರ್ ಅವರು ಬರೆದಿರುವ ಹಾಡೊಂದರ ಚಿತ್ರೀಕರಣ ಮೈನಸ್ ಹತ್ತಕ್ಕೂ ಕಡಿಮೆ ಉಷ್ಣಾಂಶವಿರುವ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ  ಸ್ಥಳದಲ್ಲಿ ನಾಲ್ಕು ದಿನಗಳ ಕಾಲ ನಡೆದಿದೆ. ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ನಾಯಕ ಅಭಯ್ ಪುನೀತ, ನಾಯಕಿ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ.
 
ಸುಮಾರು ಮೂವತ್ತು ಲಕ್ಷಕ್ಕೂ ಅಧಿಕವೆಚ್ಚದಲ್ಲಿ, ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿನೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. 
 
ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಫೆಬ್ರವರಿ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ ಈಗಾಗಲೇ ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆಗೆ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ. 
 
ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ಹಾಗೂ ಧರ್ಮ ವಿಶ್ ಹಿನ್ನೆಲೆ ಸಂಗೀತ  ನೀಡಿದ್ದಾರೆ.  ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲವಿದೆ.
 
`ಶಂಭೋ ಶಿವ ಶಂಕರ` ಮೂರು ನಾಯಕ  ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್,  ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed