ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಆರಂಭವಾಗಲಿದೆ ನೂತನ ಚಿತ್ರ
Posted date: 16 Sat, Oct 2021 11:45:06 AM
ಪಿ.ಬಿ.ಸ್ಟುಡಿಯೋಸ್ ಲಾಂಛನದಲ್ಲಿ ನೂತನ ಚಿತ್ರ ನಿರ್ಮಾಣವಾಗುತ್ತಿದೆ.
ಪನ್ನಗಾಭರಣ, ಹೊಸ ಪ್ರತಿಭೆ ನಿರ್ದೇಶಕ ವಿಶಾಲ್ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮುಂತಾದ ವರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿರಂಜೀವಿ ಸರ್ಜಾ ಅವರೊಂದಿಗೆ ಸೇರಿ ಚಿತ್ರ ನಿರ್ಮಾಣ ಮಾಡಬೇಕೆಂಬ ಹಂಬಲವಿತ್ತು. ಆಗಲಿಲ್ಲ. ಈಗ ಈ ನೂತನ ಚಿತ್ರ ಅಕ್ಟೋಬರ್ 17 ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದಂದೇ ಆರಂಭವಾಗುತ್ತಿದೆ. ಇನ್ನೂ ಸಂಸದ ವಿಷಯವೆಂದರೆ ಮೇಘನಾರಾಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರಂಭೊತ್ಸವಕ್ಕೆ ನಿರ್ದೇಶಕ ಟಿ.ಎಸ್.ನಾಗಾಭರಣ, ನಟ ಸುಂದರರಾಜ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಆಗಮಿಸಿ ಶುಭಕೋರಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed