ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ ``ಮಾಫಿಯಾ``
Posted date: 04 Sun, Jul 2021 05:22:06 PM
ಗುರುದತ್ ಗಾಣಿಗ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್  ದೇವರಾಜ್   ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ``ಮಾಫಿಯಾ``ಎಂದು ಹೆಸರಿಡಲಾಗಿದೆ. 
ಜುಲೈ 4 ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶೀರ್ಷಿಕೆ ಅನಾವರಣ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಯಿತು. 
ಇದು ಪ್ರಜ್ವಲ್ ನಾಯಕರಾಗಿ ನಟಿಸುತ್ತಿರುವ 35 ನೇ ಚಿತ್ರ.
 
ಕೇಕ್ ಕತ್ತರಿಸುವ ಮೂಲಕ ಪ್ರಜ್ವಲ್ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ, ಮೋಷನ್ ಪೋಸ್ಟರ್ ಸಹ ರಿಲೀಸ್ ಮಾಡಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಅವರು ನಿರ್ಮಿಸುತ್ತಿರುವ ಈ‌ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. 
ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.
ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed