ಮನಸೂರೆಗೊಳ್ಳುತ್ತಿದೆ ``ಮೆಹಬೂಬ`` ಚಿತ್ರದ ``ಉಸಿರೇ ಉಸಿರೇ`` ಹಾಡು.
Posted date: 18 Tue, Oct 2022 05:17:29 PM
 "ಬಿಗ್ ಬಾಸ್" ಖ್ಯಾತಿಯ ಶಶಿ ನಾಯಕನಾಗಿ ನಟಿಸಿರುವ "ಮೆಹಬೂಬ" ಚಿತ್ರದ ಮತ್ತೊಂದು ಸುಮಧುರ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. 
ವಿ.ರಘುಶಾಸ್ತ್ರಿ ಅವರು ಈ ಹಾಡನ್ನು "ಎದೆ ತುಂಬಿ ಹಾಡುವೆನು" ಖ್ಯಾತಿಯ ನದಿರಾ ಭಾನು ಇಂಪಾಗಿ ಹಾಡಿದ್ದಾರೆ.  ಮ್ಯಾಥ್ಯೂಸ್‌ ಮನು ಸಂಗೀತ ನೀಡಿದ್ದಾರೆ. ಶಶಿ ಹಾಗೂ ಪಾವನ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಸ್ಕಂದ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೇರಳದ ನಡೆದ ನೈಜಘಟನೆ ಆಧರಿಸಿರುವ ಈ ಚಿತ್ರವನ್ನು 
 ಅನೂಪ್ ಆಂಟೋನಿ ನಿರ್ದೇಶಿಸಿದ್ದಾರೆ. "ಮೆಹಬೂಬ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ.

ಮ್ಯಾಥ್ಯೂಸ್‌ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಹಾಗೂ ಸಂಭಾಷಣೆ ಯನ್ನು ರಘುಶಾಸ್ತ್ರಿ ಅವರೆ ಬರೆದಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಶಶಿ, ಪಾವನ ಗೌಡ, ಕಬೀರ್ ದುಹಾನ್ ಸಿಂಗ್, ಸಲ್ಮಾನ್(ಕಿರಿಕ್ ಪಾರ್ಟಿ), ಬುಲೆಟ್ ಪ್ರಕಾಶ್, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಕಲ್ಯಾಣಿರಾಜು, ಸಂದೀಪ್, ಧನರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed