ಫೆ. 24ಕ್ಕೆ ಸೌತ್ ಇಂಡಿಯನ್ ಹೀರೋ ಉತ್ತರ ಕರ್ನಾಟಕದಲ್ಲಿ ಭರ್ಜರಿ ರೆಸ್ಪಾನ್ಸ್
Posted date: 17 Fri, Feb 2023 11:33:38 AM
ಈ ಹಿಂದೆ ಫಸ್ಟ್ ರ‍್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ನಂಥ ಯಶಸ್ವೀ ಚಿತ್ರಗಳನ್ನು ನಿರ್ದೇಶಿಸಿದ್ದ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಅವರ ಸಾರಥ್ಯದ ಸೌತ್ ಇಂಡಿಯನ್ ಹೀರೋ ಇದೇ 24ರಂದು ಬಿಡುಗಡೆಯಾಗುತ್ತಿದೆ. ಅವರ ಪತ್ನಿ ಶಿಲ್ಪಾ  ಅವರೇ  ಚಿತ್ರದ ನಿರ್ಮಾಪಕರು.  ಕಿರುತೆರೆ ನಟ  ಸಾರ್ಥಕ್ ನಾಯಕನಾಗಿದ್ದು, ನಾಯಕಿಯಾಗಿ ಕಾಶಿಮಾ ನಟಿಸಿದ್ದಾರೆ. ಇತ್ತೀಚೆಗೆ ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆಸಲಾಯಿತು. ಈ ಕುರಿತಂತೆ ಮಾಹಿತಿ ಹಂಚಿಕೊಂಡ  ನರೇಶಕುಮಾರ್, ೧೫ ದಿನಕ್ಕೂ ಮುಂಚೆ ನಡೆಸಿದ ಪ್ರೀಮಿಯರ್‌  ಶೋಗೆ ಅದ್ಭುತ ರೆಸ್ಪಾನ್ಸ್ ದೊರೆಯಿತು. ಎಲ್ಲರೂ ಸಿನಿಮಾನ ಮೆಚ್ಚಿ ಮಾತನಾಡಿದ್ದಾರೆ. ಅವರೆಲ್ಲ ರಿಯಲ್ ಆಡಿಯನ್ಸ್, ರಿಯಲ್ ರೆಸ್ಪಾನ್ಸ್‌ ಕೊಟ್ಟಿದ್ದಾರೆ.  ಅವರಿಗೆ ಚಿತ್ರ ಇಷ್ಟವಾದರೆ ಅಲ್ಲೇ ಹೇಳಿಬಿಡುತ್ತಾರೆ. ಚಿತ್ರದಲ್ಲಿ ತೊಂಬತ್ತರಷ್ಟು ಉತ್ತರ ಕರ್ನಾಟಕದ ಭಾಷೆ ಬಳಸಿದ್ದೇವೆ.   ಒಂದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
 
ಚಿತ್ರದ ನಾಯಕ  ಭೌಶಾಸದ ಶಿಕ್ಷಕ ಲಾಜಿಕ್ ಲಕ್ಷ್ಮಣರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ತಿರುಳು. ನಾಯಕನ ಪಾತ್ರಕ್ಕೆ ಮೂರು ಶೇಡುಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಇಮೇಜ್ ಇಲ್ಲದ ಒಬ್ಬ ಯುವಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ   ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ ಎಂದು ಹೇಳಿದರು. 
 
ನಾಯಕನಟ ಸಾರ್ಥಕ್ ಮಾತನಾಡುತ್ತ, ಜನರ ಪ್ರತಿಕ್ರಿಯೆ ನೋಡೊ ನಮಗೆ ಕಾನ್ಫಿಡೆನ್ಸ್ ಬಂದಿದೆ. ಸೆನ್ಸಾರ್ ನವರೂ ಸಹ ಚಿತ್ರದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ.ಉತ್ತರ ಕರ್ನಾಟಕದ ಜನರಲ್ಲಿ ಒರಟುತನದ ಹಿಂದೆ ಪ್ರೀತಿಯಿದೆ. ಮೈಲಿಗಲ್ಲಾಗುತ್ತೆ ಮಸ್ತಾಗಿದೆ ಎಂದು ಹೇಳಿದ್ದಾರೆ. ಒಬ್ಬ ಸ್ಟಾರ್ ನಟನ ಪರ್ಸನಲ್ ಲೈಫ್ ಹೇಗಿರುತ್ತೆ,  ಲಾಜಿಕ್ ಲಕ್ಷ್ಮಣರಾವ್ ಎಲ್ಲಾ  ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವಾತ, ಅವನು ಸಿನಿಮಾಗೆ ಬಂದನಂತರ ಏನಾಗುತ್ತದೆ ಎನ್ನುವುದು ಚಿತ್ರದಲ್ಲಿದೆ ಎಂದರು‌. 
 
ನಾಯಕಿ ಕಾಶಿಮಾ ಮಾತನಾಡುತ್ತ ಸಿನಿಮಾ ಮುಗಿದಮೇಲೆ ಒಂದು ಫೀಲ್ ನಲ್ಲಿ ಜನ ಹೊರಬರುತ್ತಾರೆ.   ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದು,  ಉತ್ತರ ಕರ್ನಾಟಕ  ಬಾಷೆಯನ್ನು ಮಾತನಾಡಿದ್ದೇನೆ ಎಂದು ಹೇಳಿದರು. ಬಿತರಕ ಮಾರ್ಸ್ ಸುರೇಶ್ ಬಿಡುಗಡೆ ಬಗ್ಗೆ ಮಾತನಾಡಿದರು.  ಚಿತ್ರದಲ್ಲಿ ಒಬ್ಬ ನಿರ್ದೇಶಕನಾಗಿ  ವಿಜಯ್ ಚೆಂಡೂರು ಕಾಣಿಸಿಕೊಂಡಿದ್ದಾರೆ. ಅಮಿತ್, ಅಶ್ವಿನ್ ಕೊಡಂಗಿ, ಅಶ್ವಿನ್‌ರಾವ್ ಪಲ್ಲಕ್ಕಿ ಪೋಷಕ ಪಾತ್ರಗಳಲ್ಲಿದ್ದಾರೆ. ಚಿತ್ರದಲ್ಲಿ ೫ ಹಾಡುಗಳಿದ್ದು  ಹರ್ಷವರ್ಧನರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ, ನರೇಶಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed