16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ
Posted date: 10 Fri, Jan 2025 01:25:36 PM
​ಬೆಂಗಳೂರು, ಜ.9- ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ  ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ        ಶ್ರೀ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.
​ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
 
​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed