``ಯಲಾಕುನ್ನಿ``ಟೀಸರ್ ಗೆ ಮೆಚ್ಚುಗೆಯ ಮಹಾಪೂರ. ಟೀಸರ್ ವೈರಲ್ .. ಮತ್ತೊಮ್ಮೆ ಬೆಳ್ಳಿ ತೆರೆಯ ಮೇಲೆ ವಜ್ರಮುನಿ
Posted date: 17 Tue, Sep 2024 02:51:47 PM

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ "ಯಲಾಕುನ್ನಿ" ಚಿತ್ರದ ಟೀಸರ್ ಇತ್ತೀಚೆಗೆ ನಡೆದ "ಗಿಚ್ಚಿ ಗಿಲಿಗಿಲಿ" ಫೈನಲ್ ನಲ್ಲಿ ಬಿಡುಗಡೆಯಾಯಿತು. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯದಲ್ಲೇ ಈ ಚಿತ್ರ ಬಿಡುಗಡೆಯಾಗಲಿದೆ‌.  "ಯಲಾಕುನ್ನಿ" ಚಿತ್ರಕ್ಕೆ `ಮೇರಾ ನಾಮ್ ವಜ್ರಮುನಿ` ಎಂಬ ಅಡಿಬರಹವಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed