``ರೇವ್ ಪಾರ್ಟಿ``ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ
Posted date: 12 Mon, Jun 2023 07:38:19 AM
ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ `ರೇವ್ ಪಾರ್ಟಿ` ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.
 
ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ `ರೇವ್ ಪಾರ್ಟಿ` ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮುಂತಾದವರು ನಟಿಸಿದ್ದಾರೆ.  ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
 ಈ ಚಿತ್ರಕ್ಕೆ ರಾಜು ಬೋನಗಾನಿ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.
 
ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯವಾಗಲು ಸಹಕರಿಸಿದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ  ರಾಜು ಬೋನಗಾನಿ ಧನ್ಯವಾದ ತಿಳಿಸಿದ್ದಾರೆ.  

ಸಾಮಾನ್ಯವಾಗಿ ರೇವ್ ಪಾರ್ಟಿಗಳು ಬೆಂಗಳೂರು, ಉಡುಪಿ ಮತ್ತು ಗೋವಾದಲ್ಲಿ ನಡೆಯುತ್ತವೆ. ಈ ಪಾರ್ಟಿಗಳು ಹೇಗೆ ನಡೆಯುತ್ತವೆ? ಅದರ ಹಿಂದೆ ಯಾರೆಲ್ಲಾ ಇರುತ್ತಾರೆ? ಈ ಪಾರ್ಟಿಗಳು ಯುವ ಜನತೆಯ ಮೇಲೆ ಏನೆಲ್ಲಾ ದುಷ್ಪರಿಣಾಮಗಳು ಬೀರುತ್ತವೆ ಎಂಬ ಅಂಶಗಳನ್ನು ಈ ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇವೆ. `ರೇವ್ ಪಾರ್ಟಿ` ಚಿತ್ರವು ಇಂದಿನ ಯುವ ಜನತೆಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ನಿರ್ದೇಶಕ ರಾಜು ಬೋನಗಾನಿ. 

`ರೇವ್ ಪಾರ್ಟಿ`ಚಿತ್ರಕ್ಕೆ ದಿಲೀಪ್ ಭಂಡಾರಿ ಸಂಗೀತ ಸಂಯೋಜಿಸಿದ್ದು, ವೆಂಕಟ್ ಮನ್ನಂ ಛಾಯಾಗ್ರಹಣ ಮಾಡಿದ್ದಾರೆ. ರವಿಕುಮಾರ್ ಅವರ ಸಂಕಲನ, ವೆಂಕಟ್ ಆರೆ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed