``45`` ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .
Posted date: 25 Wed, Sep 2024 04:17:32 PM
ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ‌. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ  ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ, ಚಿತ್ರಕ್ಕೆ ಶುಭ ಕೋರಿದ್ದಾರೆ‌. ಈ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕ ರಮೇಶ್‌ ರೆಡ್ಡಿ, ಸಾಹಸ ನಿರ್ದೇಶಕ ರವಿವರ್ಮ ಸೇರಿದಂತೆ ಚಿತ್ರತಂಡದ ಅನೇಕರು ಉಪಸ್ಥಿತರಿದ್ದರು.

ಭಾರತದಲ್ಲಿ ಒಬ್ಬ ವ್ಯಕ್ತಿಯೂ ಹಸಿವಿನಿಂದ ಇರಬಾರದು ಎಂಬ ಸಂಕಲ್ಪ ಮಾಡಿರುವ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜರು ತಮ್ಮ ಹರಿಧಾಮ  ಸಾಯಿ ಟ್ರಸ್ಟ್ ನ ಮೂಲಕ ಪ್ರತಿದಿನ ಸಾವಿರಾರು ಜನರಿಗೆ ಅನ್ನದಾನ ಮಾಡುತ್ತಿದ್ದಾರೆ. ಇಂತಹ ಮಹಾತ್ಮರು, ಆಧ್ಯಾತ್ಮಿಕ ಅಂಶಗಳಿರುವ ನಮ್ಮ "45" ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಆಶೀರ್ವದಿಸಿದ್ದು ಬಹಳ ಸಂತೋಷವಾಗಿದೆ‌. ಈ ಸಂದರ್ಭದಲ್ಲಿ ಅವರಿಗೆ ಅನಂತ ನಮಸ್ಕಾರಗಳೊಂದಿಗೆ ಶ್ರೀಗಳವರಿಗೆ ಧನ್ಯವಾದ ಹೇಳುತ್ತೇನೆ ಎಂದು ನಿರ್ಮಾಪಕ ರಮೇಶ್ ರೆಡ್ಡಿ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed