``45``ಚಿತ್ರದ ಹಾಡುಗಳು ಭಾರಿ ಮೊತ್ತಕ್ಕೆ ಮಾರಾಟವಾಯಿತು ಮಲ್ಟಿಸ್ಟಾರರ್ ಸಿನಿಮಾದ ಆಡಿಯೋ ರೈಟ್ಸ್ ಆನಂದ್ ಆಡಿಯೋ ಪಡೆದುಕೊಂಡಿದೆ
Posted date: 27 Sun, Oct 2024 03:26:48 PM
ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ.  ಈ ನಡುವೆ ಚಿತ್ರತಂಡದಿಂದ ಮಹತ್ವದ ಸುದ್ದಿ ಹೊರಬಂದಿದೆ. "45" ಚಿತ್ರದ ಆಡಿಯೋ ರೈಟ್ಸ್ ಅನ್ನು ಪ್ರತಿಷ್ಟಿತ  ಆನಂದ್ ಆಡಿಯೋ ಸಂಸ್ಥೆಯವರು  ಪಡೆದುಕೊಂಡದ್ದಾರೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೆ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ‌. ಭಾರಿ ಮೊತ್ತಕ್ಕೆ ಆಡಿಯೋ ‌ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ.    

ಸದಭಿರುಚಿಯ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ಅವರ ನಿರ್ಮಾಣ, ಮ್ಯೂಸಿಕಲ್ ಮಾಂತ್ರಿಕ ಅರ್ಜುನ್ ಜನ್ಯ ಮೊದಲ ನಿರ್ದೇಶನ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ಅಭಿನಯದಲ್ಲಿ ಅದ್ದೂರಿಯಾಗಿ‌ ಮೂಡಿಬರುತ್ತಿರುವ "45" ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed