`ಶಂಭೋ ಶಿವ ಶಂಕರ`ನಿಗೆ ಸೆನ್ಸಾರ್ ಮೆಚ್ಚುಗೆ
Posted date: 12 Wed, Oct 2022 09:50:36 AM

ವರ್ತೂರು ಮಂಜು ನಿರ್ಮಾಣದ ,  ಶಂಕರ್ ಕೋನಮಾನಹಳ್ಳಿ ನಿರ್ದೇಶನದ `ಶಂಭೋ ಶಿವ ಶಂಕರ` ಚಿತ್ರವನ್ನು ಇತ್ತೀಚಿಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿದೆ.  ಯಾವುದೇ ಕಟ್ ನೀಡದೆ ಯು/ಎ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ನವಂಬರ್ ಕೊನೆಯ ವೇಳೆಗೆ ಚಿತ್ರ ತೆರೆಗೆ ಬರಲಿದೆ `ಶಂಭೋ ಶಿವ ಶಂಕರ`ಮೂರು ನಾಯಕ  ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್,  ರೋಹಿತ್ ಹಾಗೂ ರಕ್ಷಕ್ ಈ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.  ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್   ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ``ಓಟಿಟಿ ಬಿಗ್ ಬಾಸ್``ಖ್ಯಾತಿಯ ಕಿರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಮನಮೋಹಕ ಹಾಡುಗಳಿದ್ದು ಹಿತನ್ ಹಾಸನ್ ಸಂಗೀತ ನೀಡಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ``ನಾಟಿ ಕೋಳಿ`` ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಇನ್ನೆರಡು ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ  ಸಂಕಲನ  `ಶಂಭೋ ಶಿವ ಶಂಕರ`ಚಿತ್ರಕ್ಕಿದೆ. 

ಬೆಂಗಳೂರಿನಲ್ಲೇ ಈ ಚಿತ್ರದ ಬಹುತೇಕ ಚಿತ್ರೀಕರಣವಾಗಿದೆ. ಹಾಡಿನ ಚಿತ್ರೀಕರಣ ಮಾತ್ರ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಡೆದಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed