`ಪೊನ್ನಿಯಿನ್ ಸೆಲ್ವನ್-2` ಚಿತ್ರದಿಂದ ತೇಲಿ ಬಂತು `ಕಿರುನಗೆ` ಹಾಡು - ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ಸಿನಿಮಾ ರಿಲೀಸ್
Posted date: 21 Tue, Mar 2023 11:21:12 AM
ಖ್ಯಾತ ನಿರ್ದೇಶಕ ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ `ಪೊನ್ನಿಯಿನ್ ಸೆಲ್ವನ್-2 ಬಿಡುಗಡೆಗೆ ರೆಡಿಯಾಗಿದೆ. ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಈಗಾಗಲೇ ಟೀಸರ್ ಮೂಲಕ ಸೀಕ್ವೆಲ್ 2 ಮೋಡಿ ಮಾಡಲು ಶುರುವಿಟ್ಟಿದೆ. ಇದೀಗ ಚಿತ್ರತಂಡ ಚಿತ್ರದ ಮೊದಲ ಸಾಂಗ್ `ಕಿರುನಗೆ`ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಿದೆ.
 
ಮ್ಯೂಸಿಕ್ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ `ಕಿರುನಗೆ` ಹಾಡಿಗೆ ಜಯಂತ್ ಕಾಯ್ಕಿಣಿ ಚೆಂದದ ಸಾಲುಗಳನ್ನು ಪೋಣಿಸಿದ್ದು, ಗಾಯಕಿ ರಕ್ಷಿತಾ ಸುರೇಶ್ ಇಂಪಾದ ದನಿಯಾಗಿದ್ದಾರೆ. ಕಿರುನಗೆ  ಮೆಲೋಡಿ ಹಾಡು ಬಿಡುಗಡೆಯಾಗಿ ಕೇಳುಗರ ಮನ  ಸೆಳೆಯುತ್ತಿದೆ.  
 
ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ `ಪೊನ್ನಿಯಿನ್ ಸೆಲ್ವನ್ -2`. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿದೆ. 

ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ಕಾದಂಬರಿ ‘ಪೊನ್ನಿಯಿನ್ ಸೆಲ್ವನ್’ ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಸೀಕ್ವೆಲ್ ವರ್ಲ್ ವೈಡ್ ಅಭೂತ ಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಎರಡನೇ ಸೀಕ್ವೆಲ್ ರೆಕಾರ್ಡ್ ಕ್ರಿಯೇಟ್ ಮಾಡಲು ರೆಡಿಯಾಗಿದೆ.  ಏಪ್ರಿಲ್ 28ಕ್ಕೆ `ಪೊನ್ನಿಯಿನ್ ಸೆಲ್ವನ್` ಸೀಕ್ವೆಲ್ 2 ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಬರಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed