`ತ್ರಿವಿಕ್ರಮ` ಸೆನ್ಸಾರ್ ಪಾಸ್ ಇದೇ ವಾರ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ
Posted date: 21 Tue, Jun 2022 09:15:41 AM
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ `ತ್ರಿವಿಕ್ರಮ`ಜೂನ್ 24ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಸೋಮವಾರ ಸೆನ್ದಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಅರ್ಹತಾ ಪತ್ರ ದೊರಕಿದೆ. ಅದಕ್ಕೂ ಮುನ್ನ ಜರುಗಿದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಚಂದನವನದ ತಾರೆಯರ ಹಿಂಡು ಸಾಕ್ಷಿಯಾಗಿತ್ತು.

ಕ್ರೇಜಿ಼ಸ್ಟಾರ್ ರವಿಚಂದ್ರನ್, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, `ಡಾಲಿ` ಧನಂಜಯ್, ಸುಮನ್, ಶೃತಿ, ನಿಶ್ವಿಕಾ ನಾಯ್ಡು ಹಾಗೂ ಮನುರಂಜನ್ ಸೇರಿದಂತೆ ಇನ್ನೂ ಅನೇಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಾವಿರಾರು ಪ್ರೇಕ್ಷಕರು ಹಾಗೂ ಅಭಿಮಾನಿಗಳು ಹಾಜರಾಗಿದ್ದರು.

ರವಿಚಂದ್ರನ್ ಹಾಗೂ ಶಿವರಾಜ್‌ಕುಮಾರ್ `ತ್ರಿವಿಕ್ರಮ` ನೋಡಿ ಹರಸುವಂತೆ ಕೇಳಿಕೊಂಡರು. ಕಲರ್`ಫುಲ್ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಸಂಗೀತ ಸಂಜೆಯೂ ಹೈಲೈಟ್ ಆಗಿತ್ತು. 

ಸಹನಾ ಮೂರ್ತಿ `ತ್ರಿವಿಕ್ರಮ`ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ `ಪ್ಲೀಸ್ ಮಮ್ಮಿ`, `ಹನಿ ಬನಿ ಫೀಲ್ ಮೈ ಲವ್` ಹಾಗೂ `ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್...` ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್`ಗಟ್ಟಲೆ ಹಿಟ್ಸ್ ದಾಖಲಿಸಿರುವುದು `ತ್ರಿವಿಕ್ರಮ`ನ ಹೆಚ್ಚುಗಾರಿಕೆ.

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ.  ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed